ಕಲಬುರಗಿ | ಆರೆಸ್ಸೆಸ್ ನೋಂದಣಿ ಕುರಿತು ಸ್ಪಷ್ಟನೆ ನೀಡಲಿ; ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹ

Date:

ಆರೆಸ್ಸೆಸ್ ಸಂಘಟನೆಯ ನೋಂದಣಿ ಹಾಗೂ ಅದರ ಚಟುವಟಿಕೆಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ನಗದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಆರೆಸ್ಸೆಸ್ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ರಸ್ತೆ ತಡೆ ನಡೆಸಿದ ಪರಿಣಾಮ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪ್ರತಿಭಟನೆ ಉದ್ದೇಶಿಸಿ ದಿನೇಶ್ ದೊಡ್ಡಮನಿ ಮಾತನಾಡಿ, ‘ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಸಂಘಟನೆಯ ನೋಂದಣಿ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಪ್ರಶ್ನೆಗಳನ್ನು ಎತ್ತಿದ ಬಳಿಕ ಕೆಲವು ಬಿಜೆಪಿ ನಾಯಕರು ವೈಯಕ್ತಿಕ ಟೀಕೆ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

2155681

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ‘ದೇಶದ ವಿವಿಧ ಸಂಘಟನೆಗಳು ಕಾನೂನುಬದ್ಧವಾಗಿ ನೋಂದಣಿ ಮಾಡಿಕೊಂಡು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಆರೆಸ್ಸೆಸ್ ಸಂಘಟನೆಯ ನೋಂದಣಿ ಕುರಿತ ಮಾಹಿತಿಯೂ ಸಾರ್ವಜನಿಕರಿಗೆ ಲಭ್ಯವಾಗಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ಪಾರದರ್ಶಕತೆ ಇರಬೇಕು’ ಎಂದು ಒತ್ತಾಯಿಸಿದರು.

ದಲಿತ ಮುಖಂಡ ಮಲ್ಲಪ್ಪ ಹೊಸಮನಿ ಮಾತನಾಡಿ, ‘ಆರೆಸ್ಸೆಸ್ ಸಂಘಟನೆಯ ಹಣಕಾಸು ಮೂಲಗಳು ಹಾಗೂ ಅದರ ಚಟುವಟಿಕೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು’ ಅವರು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮೊಹರಂ ಹಬ್ಬ ಹಿನ್ನೆಲೆ : 8 ಗ್ರಾಮಗಳಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟಕ್ಕೂ ಬ್ರೇಕ್

ಪ್ರತಿಭಟನೆಯಲ್ಲಿ ಅಶೋಕ ವೀರನಾಯಕ, ದೇವೀಂದ್ರಪ್ಪ ಸಿನ್ನೂರು, ರಾಜೀವ್ ಜಾನೆ, ಸಿದ್ದಾರ್ಥ ಕೋರವಾರ, ರಾಮು ರಾಠೋಡ್, ಸುನೀಲ ಮಾನಪಡೆ, ಅಶ್ವಿನ್ ಸಂಕಾ, ರೇಣುಕಾ ಸಿಂಗೆ, ಶಿವಾನಂದ ಹೋನಗುಂಟಾ, ರಮೇಶ ಚಿಮ್ಮದಯಲಿ, ಮಂಜುನಾಥ ಸಿಕೆ, ರಾಜು ಕೊರಹಳ್ಳಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...