ಕಲಬುರಗಿ | ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ: ಬಿಜೆಪಿ ನೋಂದಣಿ ರದ್ದುಪಡಿಸಲು ದಸಂಸ ಧರಣಿ

Date:

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಗುರುವಾರ ಕಲಬುರಗಿ ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಿತು.

- Advertisement -

ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ ಮುಖಂಡರು, ‘ಘಟನೆಗೆ ಕಾರಣರಾದವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

‘ಖರ್ಗೆ ಅವರು ದಲಿತ ಸಮುದಾಯದ ಗೌರವದ ಪ್ರತೀಕವಾಗಿರುವ ಹಿರಿಯ ರಾಜಕಾರಣಿಯಾಗಿದ್ದು, ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ಅಸ್ಪೃಶ್ಯತೆ ಆಚರಿಸಿ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಲಾಗಿದೆ’ ಎಂದು ಸಮಿತಿ ಆರೋಪಿಸಿತು.

‘ಭಾರತ ಸಂವಿಧಾನದ ಆರ್ಟಿಕಲ್‌ 17 ಅಸ್ಪೃಶ್ಯತೆಯನ್ನು ನಿಷೇಧಿಸಿದೆ. ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

IMG 20260821 WA0356

‘ಖರ್ಗೆ ಅವರು ಭಾಷಣ ಮಾಡಿದ ಸ್ಥಳದ ಶುದ್ಧೀಕರಣದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿರುವ ಆರೋಪವಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

‘ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಬಿಜೆಪಿ ಪಕ್ಷದ ನೋಂದಣಿ ರದ್ದುಪಡಿಸುವುದು ಹಾಗೂ ಆರ್‌ಎಸ್‌ಎಸ್ ಮತ್ತು ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ದಸಂಸ ಆಗ್ರಹಿಸಿತು.

ಇದನ್ನು ಓದಿದ್ದೀರಾ? ಯಾದಗಿರಿ | ಜಾತಿ ನಿಂದನೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

ಧರಣಿಯಲ್ಲಿ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಮಲ್ಲಿಕಾರ್ಜುನ ಕ್ರಾಂತಿ, ಕಲಬುರಗಿ ಜಿಲ್ಲಾ ಸಂಚಾಲಕರಾದ ಸೂರ್ಯಕಾಂತ ಆಜಾದಪುರ, ರಾಜಕುಮಾರ ನಿಂಬಾರ, ಶಿವಕುಮಾರ ಕೋರಳ್ಳಿ ಸೇರಿದಂತೆ ಜೇವರ್ಗಿ, ಅಫಜಲಪುರ, ಸೇಡಂ, ಚಿಂಚೋಳಿ ಮತ್ತಿತರ ತಾಲೂಕುಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...