ಕಲಬುರಗಿ | ಅಕ್ರಮ ಮರಳು ದಂಧೆ ವಿರುದ್ಧ ದೂರು; ಕರವೇ ಜಿಲ್ಲಾಧ್ಯಕ್ಷನಿಗೆ ಜೀವ ಬೆದರಿಕೆ, ಪ್ರಕರಣ ದಾಖಲು

Date:

ಅಕ್ರಮ ಮರಳು ದಂಧೆ ವಿರುದ್ಧ ದೂರು ನೀಡಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾಧ್ಯಕ್ಷ ಆನಂದ ಎಸ್. ದೊಡ್ಡಮನಿ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

- Advertisement -

ದೂರಿನ್ವಯ, ಶಹಾಬಾದ್ ತಾಲೂಕಿನ ಕಡೆಹಳ್ಳಿ ಸಮೀಪ ಭೀಮಾ ನದಿಗೆ ನಿರ್ಮಿಸಲಾಗುತ್ತಿರುವ ಬ್ಯಾರೇಜ್ ಕಾಮಗಾರಿಯಲ್ಲಿ ಅಕ್ರಮವಾಗಿ ಬೋಟ್ ಬಳಸಿ ಮರಳು ಸಾಗಾಟ ಮತ್ತು ಬಳಕೆ ನಡೆಯುತ್ತಿದೆ ಎಂದು ಕರವೇ ವತಿಯಿಂದ ತಹಶೀಲ್ದಾರ್‌ಗೆ ದೂರು ಸಲ್ಲಿಸಲಾಗಿತ್ತು. ಅದರಂತೆ ಜು. 3ರಂದು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಬೆಳವಣಿಗೆಯಿಂದ ಅಕ್ರಮ ಮರಳು ದಂಧೆ ಬಯಲಾಗುವ ಭೀತಿಯಿಂದ ಅರುಣ್ ಭರಣಿ ಹಾಗೂ ಆತನ ಬೆಂಬಲಿಗರು ಜಗತ್ ವೃತ್ತದ ಸಮೀಪದ ಆಮಂತ್ರಣ ಹೋಟೆಲ್ ಬಳಿ ಆನಂದ ದೊಡ್ಡಮನಿ ಅವರನ್ನು ತಡೆದು ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿ ಅರುಣ್ ಭರಣಿ ತನ್ನೊಂದಿಗೆ ರೌಡಿಶೀಟರ್ ಸಾಗರ್ ಸೇರಿದಂತೆ 10ರಿಂದ 15 ಮಂದಿಯನ್ನು ಕರೆದುಕೊಂಡು ಬಂದು, “ಮರಳು ದಂಧೆ ವಿರುದ್ಧ ದೂರು ನೀಡಲು ನಿನಗೆಷ್ಟು ಧೈರ್ಯ? ಜೀವಂತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು, ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾಗಳನ್ನು ಗಮನಿಸಿ ಅಲ್ಲಿಂದ ತೆರಳುವ ವೇಳೆ ಸುಪಾರಿ ಕೊಟ್ಟು ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಭೀಮಾ ನದಿ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ; ದೂರು ದಾಖಲು

ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...