ಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್‌ರಿಗೆ ಪಿಡಿಒ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪಿಡಿಒ ವಿರುದ್ಧ ದೂರು ದಾಖಲಿಸಲಾಗಿದೆ.
ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮ ಪಂಚಾಯತಿಯಲ್ಲಿ ಘಟನೆ ನಡೆದಿದೆ. ಪಂಚಾಯತಿಯ ಪಿಡಿಒ ಮಹಾನಂದ ಎನ್ ಗುತ್ತೇದಾರ ಅವರು ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಹರಿದ ಭಾವಚಿತ್ರವನ್ನು ಇರಿಸಿ, ಅಪಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಪಿಡಿಒ ಮಹಾನಂದ ಗುತ್ತೇದಾರ ವಿರುದ್ಧ ಭಾರತ್ ಮುಕ್ತ ಮೋರ್ಚಾ ಸಂಘಟನೆ ಮುಖಂಡರಾದ ಮಾರುತಿ ಗಂಜಗಿರಿ, ಶಾಮರಾವ್ ಕಲಬುರಗಿ ದೂರು ದಾಖಲಿಸಿದ್ದಾರೆ.
ಪಿಡಿಒ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಆದರೂ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.