ಕಲಬುರಗಿ | ಸಂವಿಧಾನದಿಂದಾಗಿ ಸರ್ವರಿಗೂ ಸಮಾನ ಅವಕಾಶ ಲಭಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಭಾರತ ಇಂದು ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ‌ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ವಾಡಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಸಮಾರೋಪ ಸಮಾರಂಭ, ಸಾಂಸ್ಕೃತಿಕ‌ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ,‌ ಅಂದಾಜು ₹423.09 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಉದ್ಘಾಟಿಸಿ  ಮಾತನಾಡಿದರು.

“ಸ್ವಾಭಿಮಾನದ ಬದುಕು ಹಾಗೂ ಆರ್ಥಿಕ‌ ಸಮಾನತೆ ಸಿಗುತ್ತಿದೆ. ಸಂವಿಧಾನದ 75 ವರ್ಷದ ಆಚರಣೆ ಮಾಡುವುದರ ಜತೆಗೆ ಬಸವಣ್ಣನವರ ತತ್ವಗಳ ಆಧಾರದ ಮೇಲೆ ಯೋಜನೆಗಳು ಹಾಗೂ ನೀತಿಗಳನ್ನು ರೂಪಿಸಲಾಗುತ್ತಿದೆ. ಹಾಗಾಗಿ, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಲಾಗಿದೆ. ಬಸವ ತತ್ವಕ್ಕು ಸಂವಿಧಾನದ ಆಶಯಕ್ಕೂ ನಂಟಿದೆ. ಸರ್ವರಿಗೂ ಸಮಪಾಲು ಹಾಗೂ ಸಮಬಾಳು ಈ ಎರಡರಲ್ಲಿದೆ” ಎಂದರು.

Advertisements

“ಯಾರೂ ಕೂಡಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಂತೆ ಅರ್ಜಿ ಸಲ್ಲಿಸಿರಲಿಲ್ಲ. ಆದರೆ ಜನರ ಆರ್ಥಿಕ ಸ್ಥಿತಿಗತಿ ಹಾಗೂ ಸಂಕಟ ಅರಿತುಕೊಂಡು ಕಾಂಗ್ರೆಸ್ ಭರವಸೆ ನೀಡಿತ್ತು. ಅದರಂತೆ ಜಾರಿಗೆ ತಂದಿದ್ದೇವೆ. ಆದರೆ, ಬಿಜೆಪಿಯವರು ಇದನ್ನು ವಿರೋಧಿಸುತ್ತಿದ್ದಾರೆ. ಯಾಕೆಂದರೆ, ಅವರಿಗೆ ಸಾಮಾನ್ಯ‌ ಜನರು ಮನೆ ನಡೆಸಲು ಪಡುವ ಕಷ್ಟದ ಅರಿವಿಲ್ಲ. ಅವರಿಗೆ ಮನೆ ನಡೆಸುವುದು ಗೊತ್ತಿಲ್ಲ. ಮನೆ ಮುರಿಯುವುದು ಮಾತ್ರ ಗೊತ್ತಿದೆ” ಎಂದು ಟೀಕಿಸಿದರು.

ಗೃಹ ಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಂದಾಗಿ ಜನರು ನೆಮ್ಮದಿಯಿಂದ ಇದ್ದಾರೆ. ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ತೆರಿಗೆ ಹಣವನ್ನು ಜನರ ಕಲ್ಯಾಣಕ್ಕಾಗಿ ಬಳಸಿಕೊಳ್ಳುತ್ತಿದೆ. ಆದರೆ, ಬಿಜೆಪಿ ಸಾರ್ವಜನಿಕರ ದುಡ್ಡನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುತ್ತಿತ್ತು. ಯಾವುದೇ ಕಾರಣಕ್ಕೂ ಅರ್ಥಿಕ‌ ಸ್ಥಿರತೆ ತಂದುಕೊಡುವ ಈ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ‌ ವಿಚಾರದಲ್ಲಿ ಬಿಜೆಪಿಯವರ ಸುಳ್ಳು ಹೇಳಿಕೆಗಳನ್ನು ನಂಬಬೇಡಿ” ಎಂದು ಸ್ಪಷ್ಟಪಡಿಸಿದರು.

“ನಮ್ಮ ಸರ್ಕಾರದ ಗ್ಯಾರಂಟಿಗಳನ್ನೇ ಕಾಪಿ ಮಾಡಿರುವ ಬಿಜೆಪಿ ಇದೀಗ ʼಮೋದಿ ಗ್ಯಾರಂಟಿʼ ಎಂದು ಹೇಳುತ್ತಿದೆ. ಆದರೆ ಆರ್ಥಿಕ ಅಸಮಾನತೆ,‌ ನಿರುದ್ಯೋಗ, ಸುಳ್ಳು, ಕೋಮುಗಲಭೆಗಳು ಮೋದಿ ಗ್ಯಾರಂಟಿಗಳು” ಎಂದು ಕುಟುಕಿದರು.

“ಚಿತ್ತಾಪುರ ಕ್ಷೇತ್ರಕ್ಕೆ ಅನುದಾನ ಮಾಡುವ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದ ಅನ್ಯಾಯವಾಗಿದೆ.‌ ನಾನು ಇತ್ತೀಚಿಗೆ ಸಚಿವನಾಗಿದ್ದೇನೆ. ಕ್ಷೇತ್ರಕ್ಕೆ ಅನುದಾನ ತಂದು ಸಮಗ್ರ ಅಭಿವೃದ್ದಿಪಡಿಸುತ್ತೇನೆ. ಈ ಹಲೂ ಕೂಡ ಸುಮಾರು ₹423 ಕೋಟಿ ವೆಚ್ಚದಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದೇನೆ” ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಮಾತನಾಡಿ, “ಬಿಜೆಪಿ ಸರ್ಕಾರ ಅಧಿಕಾರಿದಲ್ಲಿ ಇದ್ದಾಗ ಲೂಟಿ ಹೊಡೆದಿತ್ತು. ಈಗ ನಮ್ಮ ಸರ್ಕಾರದ ಗ್ಯಾರಂಟಿ ಯೋಜನಗಳ ಬಗ್ಗೆ ಅನಗತ್ಯ ಟೀಕೆ ಮಾಡುತ್ತಿದ್ದಾರೆ. ಯುವಜನರ ನೇಮಕಾತಿ ಮಾಡಿಕೊಳ್ಳುವ ಮೂಲಕ ಅವರ ಅರ್ಥಿಕ ಸದೃಢತೆಗೆ ಕ್ರಮವಹಿಸಲು ಬದ್ಧವಾಗಿದೆ” ಎಂದು ಹೇಳಿದರು.

“ಸಂಸದ ಅನಂತಕುಮಾರ್‌ ಅವರ ಸಂವಿಧಾನ ಬದಲಾವಣೆ ಹೇಳಿಕೆ ಬಿಜೆಪಿ ಪಕ್ಷದ ಅಧಿಕೃತ ಹೇಳಿಕೆಯಾಗಿದೆ. ಅವರ ಹೇಳಿಕೆ ಖಂಡನೆ ಮಾಡದೇ ಪ್ರಧಾನಿಯೂ ಸುಮ್ಮನಿದ್ದಾರೆ. ಸಂವಿಧಾನ ಬದಲಾವಣೆ ಉದ್ದೇಶದ ಹಿಂದೆ ಮೀಸಲಾತಿ ತೆಗೆಯುವ ಹುನ್ನಾರವಿದೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳಿಗೆ ಮೀಸಲಾತಿ ಸಹಿಸಲು ಆಗುತ್ತಿಲ್ಲ. ಈಗಲಾದರೂ ಜನರು ಒಂದಾಗಬೇಕಿದ್ದು ಅವರ ಹುನ್ನಾರ ಅರ್ಥ ಮಾಡಿಕೊಂಡು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು” ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಿ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಗೌರವಿಸಿದರು.

ಇದಕ್ಕೂ ಮುನ್ನ ಸಚಿವರು ಸೇರಿದಂತೆ ಇತರೆ ಗಣ್ಯರು ಪಟ್ಟಣದ ಬಸವೇಶ್ವರ ಹಾಗೂ ಡಾ ಬಿ ಆರ್  ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಹೇಮಾವತಿ ನಾಲೆ ಸುತ್ತ ಮಾ.12ರಿಂದ ನಿಷೇಧಾಜ್ಞೆ ಜಾರಿ

ವೇದಿಕೆಯ ಮೇಲೆ ಸಿಎಂ ಸಲಹೆಗಾರ ಬಿ ಆರ್ ಪಾಟೀಲ್, ಶಾಸಕರುಗಳಾದ ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರು, ಮಜರ್ ಖಾನ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ‌ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ‌ ಕಮೀಷನರ್ ಭುವನೇಶ್ ಪಾಟೀಲ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಟೋಪಣ್ಣ, ಡಿ ಜಿ ಸಾಗರ ಸೇರಿದಂತೆ ಇತರರು ಇದ್ದರು.

ಮಾಹಿತಿ: ವಿಕ್ರಮ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X