ಕಲಬುರಗಿ | ಆಗಸ್ಟ್ 9, 10ರಂದು ವಿದ್ಯಾರ್ಥಿಗಳಿಗೆ ರಚನಾತ್ಮಕ ಉದ್ಯೋಗಾವಕಾಶ ಮೌಲ್ಯಮಾಪನ

Date:

Advertisements

ಕಳೆದ ಏಪ್ರಿಲ್‌ನಲ್ಲಿ ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದ ಮುಂದುವರಿದ ಭಾಗವಾಗಿ, ಆಗಸ್ಟ್ 9 ಮತ್ತು 10 ರಂದು ಕಲಬುರಗಿಯ ಶೆಟ್ಟಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮೊದಲ ಹಂತದಲ್ಲಿ 2,500ಕ್ಕೂ ಹೆಚ್ಚು STEM ವಿದ್ಯಾರ್ಥಿಗಳಿಗೆ ರಚನಾತ್ಮಕ ಉದ್ಯೋಗಾವಕಾಶ ಮೌಲ್ಯಮಾಪನ ಅಭಿಯಾನವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

“ಪ್ರತಿ ಅಭ್ಯರ್ಥಿಯ ಸಾಮರ್ಥ್ಯ, ಸಂವಹನ ಕೌಶಲ್ಯ, ಡಿಜಿಟಲ್ ಸಾಕ್ಷರತೆ ಮತ್ತು ನಡವಳಿಕೆಯ ಸಿದ್ಧತೆಯನ್ನು ಸಮರ್ಪಕವಾಗಿ ಅರಿಯಲು ನಾವು ಪ್ರತಿದಿನ ನಾಲ್ಕು ಸ್ಲಾಟ್‌ಗಳಲ್ಲಿ ನಡೆಸುವ 90 ನಿಮಿಷಗಳ ಆನ್‌ಲೈನ್ ಪರೀಕ್ಷೆಯನ್ನು ಉಚಿತವಾಗಿ ಆಯೋಜಿಸಲಾಗುತ್ತದೆ. ಮೌಲ್ಯಮಾಪನದ ನಂತರ ಪ್ರತಿಯೊಬ್ಬ ವಿದ್ಯಾರ್ಥಿಯು ವೈಯಕ್ತಿಕಗೊಳಿಸಿದ ಕೌಶಲ್ಯ-ಅಂತರದ ವರದಿ ಮತ್ತು ಅವರ ತರಬೇತಿ ಹಾಗೂ ಉದ್ಯೋಗ ಪ್ರಯತ್ನಗಳಿಗೆ ಮಾರ್ಗದರ್ಶನಕ್ಕಾಗಿ ವೈಯಕ್ತಿಕ ಅಭಿವೃದ್ಧಿ ಯೋಜನೆಯನ್ನು ಪಡೆಯುತ್ತಾರೆ” ಎಂದು ಅಭಿಪ್ರಾಯ ಪಟ್ಟರು.

“ಇದು ನಮ್ಮ ಪ್ರಮುಖ ಮರುಕೌಶಲ್ಯ ಮತ್ತು ಉನ್ನತೀಕರಣ ಕಾರ್ಯಕ್ರಮವಾದ ‘ನಿಪುಣ ಕರ್ನಾಟಕ’ದ ಅಡಿಯಲ್ಲಿ ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಸಿದ್ಧತೆಯನ್ನು ನಿಜವಾದ ಉದ್ಯೋಗ ಅಗತ್ಯಗಳೊಂದಿಗೆ ಬೆಸೆಯಲು ಸಹಾಯ ಮಾಡುತ್ತದೆ. ಇಲ್ಲಿ ಪರೀಕ್ಷಿಸಿದ ನಂತರ, ನಮ್ಮ ಪದವೀಧರರು ಸೂಕ್ತ ಸ್ಥಾನವನ್ನು ಕಂಡುಕೊಳ್ಳಲು ಮತ್ತು ವೃತ್ತಿ ಫಲಿತಾಂಶಗಳನ್ನು ಸುಧಾರಿಸುವುದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಉದ್ಯೋಗದಾತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಈ ಮಾದರಿಯನ್ನು ವಿಸ್ತರಿಸಲಾಗುವುದೆಂದು” ತಿಳಿಸಿದ್ದಾರೆ.

Advertisements

ಇದನ್ನೂ ಓದಿ: ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

“ನೋಂದಣಿಗಳಿಗೆ ಈಗಾಗಲೇ https://unstop.com/o/xvCVUWP/?ref=KalaburgiAssessment ನಲ್ಲಿ ಅವಕಾಶವಿದ್ದು, ಇದು ಆಗಸ್ಟ್ 7 ರಂದು ಮುಕ್ತಾಯಗೊಳ್ಳಲಿದೆ. ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನಕ್ಕೆ ಉತ್ತಮವಾಗಿ ತಯಾರಿ ನಡೆಸಲು ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X