ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಆರೋಪಿಯ ಬಂಧನ

Date:

ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಯನ್ನು ರೋಜಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

- Advertisement -

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಹಿನ್ನೆಲೆಯಲ್ಲಿ ಉಪ ಪೊಲೀಸ್ ಆಯುಕ್ತರಾದ ಶಾಲೂ ಹಾಗೂ ಪ್ರವೀಣ್ ಹೆಚ್. ನಾಯಕ್ ಮತ್ತು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಿವನಗೌಡ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ರೋಜಾ ಪೊಲೀಸ್ ಠಾಣೆ ಪಿಐ ದಿಲೀಪ್ ಸಾಗರ್ ನೇತೃತ್ವದ ಪೊಲೀಸ್ ತಂಡವು ಕಾರ್ಯಾಚರಣೆ ನಡೆಸಿತು.

‘ಆಗಸ್ಟ್ 25ರಂದು ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಯನ ರಸ್ತೆ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮಹಮ್ಮದ್ ಅಲ್ಲಾವುದ್ದೀನ್ (47) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಚಾಲಕನಾಗಿದ್ದು, ಕಲಬುರಗಿ ನಗರದ ಬಾಂಬೆ ಹೋಟೆಲ್ ಸಮೀಪ ನಿವಾಸಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವೈದ್ಯಕೀಯ ಪರೀಕ್ಷೆಯ ದೃಢೀಕೃತ ವರದಿ ಆಧರಿಸಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಶಿವಕುಮಾರ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಬೀದರ್‌ | ಅರಣ್ಯೀಕರಣ, ಹಸಿರು ಹೊದಿಕೆ ಹೆಚ್ಚಳಕ್ಕೆ ಆದ್ಯತೆ ನೀಡಿ : ಸಚಿವ ರಾಮಲಿಂಗರೆಡ್ಡಿ

ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು...

ಚಿಂತಾಮಣಿ | ಪೊಲೀಸರ ಮಾನವೀಯತೆ:112 ವಾಹನದಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಸಮೀಪ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸ್ವಯಂ ಅಪಘಾತ...

ಕುಮಟಾ | ಹೊಳೆಗದ್ದೆ ಟೋಲ್ ಬಳಿ ಅಲ್ಫಾ ವೈನ್ ಶಾಪ್‌ನಲ್ಲಿ ಕಳ್ಳತನ; 2.39 ಲಕ್ಷ ರೂ. ನಗದು ದರೋಡೆ

ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಬಳಿಯ ಅಲ್ಫಾ ವೈನ್ ಶಾಪ್‌ನ ಶೆಟರ್...

ಉಡುಪಿ | ಮೂಲ ನಿವಾಸಿಗಳ ಮತದಾನದ ಹಕ್ಕು ಕಿತ್ತುಕೊಳ್ಳುವ ಸಂಚು: ಜ್ಞಾನಪ್ರಕಾಶ ಸ್ವಾಮೀಜಿ ಆರೋಪ

ಮೂಲನಿವಾಸಿಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಿಕೊಂಡು ಜಾಗೃತರಾದಾಗ ಮಾತ್ರ...