ಕಲಬುರಗಿ | ಉನ್ನತ ಶಿಕ್ಷಣ ಕರಡು ಪ್ರಸ್ತಾಪ ತಿರಸ್ಕಾರ; ಗುಲ್ಬರ್ಗಾ ವಿವಿ ಕುಲಸಚಿವರಿಗೆ ಎಸ್‌ಎಫ್‌ಐ ಮನವಿ

Date:

Advertisements

ವಿಶ್ವವಿದ್ಯಾಲಯಗಳ ಅನುದಾನ ಆಯೋಗ 2025ರ ಉನ್ನತ ಶಿಕ್ಷಣ ಕರಡು ನಿಯಮಗಳ ಪ್ರಸ್ತಾಪವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಕಲಬುರಗಿ ಜಿಲ್ಲಾ ಸಮಿತಿ ತಿರಸ್ಕರಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಮುಖಾಂತರ ಕೇಂದ್ರ ಶಿಕ್ಷಣ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಜಿಲ್ಲಾ ಸಹಕಾರ್ಯದರ್ಶಿ ಸುಜತಾ ವೈ ಮಾತನಾಡಿ, “ವಿಶ್ವವಿದ್ಯಾಲಯ ಅನುದಾನ ಆಯೋಗದ(ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಹಾಗೂ ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ನಿರ್ವಹಿಸುವ) ನಿಯಮಗಳು, 2025ರ ಕರಡನ್ನು ಸೋಮವಾರ (ಜ.6, 2025) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದರು. ಇದು ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣವನ್ನು ಕೇಂದ್ರೀಕರಣ ಮತ್ತು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವ ಕೇಂದ್ರ ಸರ್ಕಾರದ ಮತ್ತೊಂದು ಪ್ರಯತ್ನವಾಗಿದೆ” ಎಂದು ಆರೋಪಿಸಿದರು.

“ವಿರೋಧ ಪಕ್ಷದ ಆಡಳಿತವಿರುವ ತಮಿಳುನಾಡು, ಕೇರಳದಂತಹ ಹಲವು ರಾಜ್ಯಗಳ ಸರ್ಕಾರಗಳು ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಅನೇಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಂಘರ್ಷ ನಡೆಸುತ್ತಿವೆ. ಈಗ ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ. ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಕೂಡಾ ಕನಿಷ್ಟ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಅವಕಾಶ ನೀಡಲಾಗಿದೆ. ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಕೂಡಾ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

Advertisements

“ಯುಜಿಸಿ ಸಿದ್ದಪಡಿಸಿರುವ ಕರಡುವಿನಲ್ಲಿ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ.55ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ. ಅವರು ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ(ಎನ್‌ಇಟಿ) ಅರ್ಹತೆಪಡೆದುಕೊಳ್ಳುವ ಅಗತ್ಯವಿಲ್ಲ. ಇದು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಪ್ರಸ್ತುತ ಸಂದರ್ಭದಲ್ಲಿ, ಷರತ್ತು 3.8ರಲ್ಲಿ ಬೋಧನೆ ಮತ್ತು ಸಂಶೋಧನೆಯ ಮೇಲೆ ನೇರವಾದ ಪ್ರಭಾವ ಹೊಂದಿರದ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರವು ಸಂಶೋಧನೆಯಿಂದ ತನ್ನದೇ ಆದ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುತ್ತಿದೆ ಮತ್ತು ವೆಂಚರ್ ಫಂಡ್‌ಗಳ ಹೆಸರಿನಲ್ಲಿ ವಿವಿಧ ಖಾಸಗಿ ಉದ್ಯಮಿಗಳಿಗೆ ದಾರಿ ಮಾಡಿಕೊಡುತ್ತಿದೆ. ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆ ಆಧಾರಿತ ಸಂಶೋಧನೆಯತ್ತ ಕೊಂಡೊಯ್ಯುತ್ತದೆ. ವೆಂಚರ್ ಫಂಡ್‌ಗಳ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನಿಡಲಾಗಿಲ್ಲ. ಈ ಕರಡು ವರದಿಯಲ್ಲಿ ಬೋಧಕ ಹುದ್ದೆಗಳ ಮೀಸಲಾತಿ ಬಗ್ಗೆಯೂ ಮೌನ ವಹಿಸಿದೆ. ಇದು ಕೇಸರಿಕರಣದ ಕಡೆಗೆ ಕಾರಣವಾಗಬಹುದು” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

“ಈ ಪರಿಸ್ಥಿತಿಯಲ್ಲಿ, ಭಾರತ ವಿದ್ಯಾರ್ಥಿ ಫೆಡರೇಷನ್ ಕರ್ನಾಟಕ ರಾಜ್ಯ ಸಮಿತಿ ಹೊಸ ಕರಡನ್ನು ತಿರಸ್ಕರಿಸುತ್ತಿದ್ದು, ದೇಶದ ಉನ್ನತ ಶಿಕ್ಷಣವನ್ನು ಉಳಿಸಲು ಮುಂದಾಗಬೇಕು” ಎಂದು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.

ಜಿಲ್ಲಾ ಸಹ ಕಾರ್ಯದರ್ಶಿ ಸುಜಾತಾ ವೈ, ಜಿಲ್ಲಾ ಉಪಾಧ್ಯಕ್ಷರು ಪ್ರೇಮ್, ನಾಗಮ್ಮ, ಜಿಲ್ಲಾ ಸಹ ಕಾರ್ಯದರ್ಶಿ ಭರತ್, ಅಭಿ, ಮಾಲಾಶ್ರೀ, ಜಿಲ್ಲಾ ಸಮಿತಿ ಸದಸ್ಯೆ ಹುಲಗಮ್ಮ ಸೇರಿದಂತೆ ಹಬುತೇಕ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X