ಕಲಬುರಗಿ | ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಆ.10ರಿಂದ ಸಿಪಿಐ ಪಾದಯಾತ್ರೆ

Date:

“ಬದಲಾವಣೆ ಅಗತ್ಯವಾಗಿದೆ” ಎಂಬ ಘೋಷಣೆಯೊಂದಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ರಾಜಕೀಯ ಅಭಿಯಾನದ ಅಂಗವಾಗಿ ಆ.10ರಂದು ಖಾದ್ಯಾಪುರದಿಂದ ಯಾಳವಾರ ಗ್ರಾಮ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜೇವರ್ಗಿ ತಾಲೂಕು ಕಾರ್ಯದರ್ಶಿ ಮಹಮ್ಮದ್ ಚೌದರಿ ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಆ.10ರಂದು ಬೆಳಿಗ್ಗೆ 9.30ಕ್ಕೆ ಖಾದ್ಯಾಪುರ ಗ್ರಾಮದ ಐಯ್ಯಣ್ಣ ಮುತ್ಯಾನ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದೆ. ಕೊಡಚಿ ಮಾರ್ಗವಾಗಿ ಯಾಳವಾರ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳುವ ಪಾದಯಾತ್ರೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಗುವುದು’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

‘ಗ್ರಾಮಗಳಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದು, ತ್ವರಿತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗುವುದು. ಯಾಳವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹1.36 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

‘ಸಾರ್ವಜನಿಕರ ಹಣ ದುರುಪಯೋಗವಾಗಿರುವ ಆರೋಪದ ಕುರಿತು ಪಾರದರ್ಶಕ ತನಿಖೆ ನಡೆಸಿ ವಾಸ್ತವಾಂಶವನ್ನು ಬಹಿರಂಗಪಡಿಸಬೇಕು. ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಸಾರ್ವಜನಿಕ ಶೌಚಾಲಯ, ಶಾಲೆಗಳಿಗೆ ಅಗತ್ಯ ಶಿಕ್ಷಕರ ನೇಮಕ, ಆರೋಗ್ಯ ಸೌಲಭ್ಯ, ಬಸ್ ವ್ಯವಸ್ಥೆ, ಬೀದಿ ದೀಪ ಹಾಗೂ ಕೊಳವೆಬಾವಿಗಳ ದುರಸ್ತಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕ ಕೆಲಸ ಒದಗಿಸಬೇಕು. ವಸತಿ ಹಾಗೂ ನಿವೇಶನ ರಹಿತರಿಗೆ ಮನೆ ಮತ್ತು ನಿವೇಶನ ಕಲ್ಪಿಸಬೇಕು. ಬಾಕಿ ಇರುವ ವಿಧವಾ, ವೃದ್ಧಾಪ್ಯ ಹಾಗೂ ವಿಶೇಷಚೇತನರ ಪಿಂಚಣಿಯನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ‘ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶ್ ಕುಮಾರ್ ರಾಠೋಡ್, ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ದೊಡ್ಡಮನಿ, ಮಲ್ಕಪ್ಪ ವಾಗಣಗೇರಿ, ರಾಘವೇಂದ್ರ ಹಂಗರಗ, ರವಿಕುಮಾರ್ ಈರಣ್ಣಗೌಡ, ನಂದಪ್ಪ ಗುರಿಕಾರ್ ಸೇರಿದಂತೆ ಪಕ್ಷದ ಮುಖಂಡರು, ನೂರಾರು ಗ್ರಾಮಸ್ಥರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಪ್ರಗತಿಪರರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ವಿವಿಧ ಸಮುದಾಯಗಳ ಒಗ್ಗಟ್ಟು ಪ್ರದರ್ಶನ

ಪಾದಯಾತ್ರೆಯು ಆ.14ರಂದು ಜೇವರ್ಗಿ ತಾಲೂಕು ಕೇಂದ್ರದಲ್ಲಿ ಸಮಾರೋಪಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮಹಮ್ಮದ್ ಚೌದರಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...