ಕಲಬುರಗಿ | ಅಮೆರಿಕ ಉಪಾಧ್ಯಕ್ಷ ಭಾರತ ಭೇಟಿ ವಿರೋಧಿಸಿ ಸಿಪಿಐಎಂ ಪ್ರತಿಭಟನೆ

Date:

ಅಮೆರಿಕ ದೇಶದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಯನ್ನು ವಿರೋಧಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಕರೆ ನೀಡಿರುವ ಹೋರಾಟಕ್ಕೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ಬೆಂಬಲ ಸೂಚಿಸಿದೆ ಎಂದು ಪಕ್ಷದ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ತಿಳಿಸಿದರು.

- Advertisement -

ಇಂದು ಕಲರಬುರಗಿಯಲ್ಲಿ ಪ್ರತಿಭಟನೆ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಭಾರತವು ಮಾರಾಟಕ್ಕಿಲ್ಲʼ ಎಂಬ ಬಲವಾದ ಸಂದೇಶ ರವಾನಿಸಲು, ಇಂದು (ಏ. 21) ಗ್ರಾಮ, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಮಾರುಕಟ್ಟೆ, ಕೈಗಾರಿಕಾ ಬಿಡಿ ಉತ್ಪನ್ನಗಳನ್ನು ಅಮೆರಿಕ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ. ಈ ಹಿನ್ನೆಲೆ ಅಮೆರಿಕ ಉಪಾಧ್ಯಕ್ಷರ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ” ಎಂದರು. ಪ್ರತಿಭಟನೆ ಹಿನ್ನೆಲೆ ಟ್ರಂಪ್-ವ್ಯಾನ್ಸ್ ಪ್ರತಿಕೃತಿ ದಹಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದ ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳ ರೈತ ಕುಟುಂಬಗಳು ತಮ್ಮ ಜೀವನಾಧಾರಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿವೆ. ತೊಗರಿ, ಸೋಯಾಬೀನ್, ಬಟಾಣಿ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಮೆಕ್ಕೆಜೋಳ, ಎಥೆನಾಲ್ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಬೆಳೆಗಳಾಗಿವೆ. ಅದೇ ರೀತಿ ಕರಾವಳಿ ಕರ್ನಾಟಕದ ಪ್ರಮುಖ ಜೀವನೋಪಾಯ ಮೀನುಗಾರಿಕೆ ಕೃಷಿಯನ್ನು ಅವಲಂಬಿಸಿದೆ. ಈ ಎಲ್ಲಾ ಕೃಷಿ ಉತ್ಪನ್ನಗಳು ಈಗಾಗಲೇ ಬೆಂಬಲ ಬೆಲೆ ಅಭಾವ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಷ್ಟ ಹಾಗೂ ನಷ್ಟವನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕ ರಹಿತ ಆಮದು ಈ ಎಲ್ಲಾ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ-ಸಾಲಬಾಧೆಗೆ ಸಿಲುಕಿಸಲಿದೆ. ವಿಶೇಷವಾಗಿ ರಾಜ್ಯದ ಹೈನುಗಾರಿಕೆಗೆ ಮತ್ತು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ಕ್ಕೆ ಈ ಆಮದು ಸುಂಕ ನಿರ್ಧಾರ ಶವಪಟ್ಟಿಗೆಗೆ ಹೊಡೆಯುವ ಕೊನೆ ಮೊಳೆ ಆಗಲಿದೆ. ಹಾಗಾಗಿ ಯಾವುದೇ ಒತ್ತಡಕ್ಕೂ ಮಣಿಯದೇ ಹೈನುಗಾರಿಕೆ, ಮೀನುಗಾರಿಕೆ, ತೋಟಗಾರಿಕೆ ಸೇರಿದಂತೆ ಒಟ್ಟಾರೆ ಕೃಷಿಯನ್ನು ವಾಣಿಜ್ಯ ಮಾತುಕತೆಗಳಿಂದ ಹೊರಗಿಡಬೇಕು” ಎಂದು ನರೇಂದ್ರ ಮೋದಿ ಸರ್ಕಾರವನ್ನು ಆಗ್ರಹಿಸಿದರು.

“ಅಮೇರಿಕಾದಲ್ಲಿ ಶೇಕಡಾ 70ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ, ಮೆಕ್ಸಿಕೋ ಮುಂತಾದ ದೇಶಗಳು ಆಮೇರಿಕಾದ ಸುಂಕ ಸಮರದ ಬೆದರಿಕೆಗೆ ಯಾವುದೇ ರೀತಿಯಲ್ಲಿ ಮಣಿಯದೇ ತಿರುಗೇಟು ನೀಡಿದೆ. ಆದರೆ ಆಮೇರಿಕಾದ ಜೊತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಸ್ವತಃ ನರೇಂದ್ರ ಮೋದಿರವರ ಸಮ್ಮುಖದಲ್ಲೇ ಭಾರತವನ್ನು ಸುಂಕ ರಾಜ ಎಂದು ಡೋನಾಲ್ಡ್ ಟ್ರಂಪ್ ಅಣಕಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದಾಗಲೂ, ಭಾರತದ ವಲಸೆ ಕಾರ್ಮಿಕರನ್ನು ಕೊಳತೊಡಿಸಿ ಅಮಾನವೀಯವಾಗಿ ನಡೆಸಿಕೊಂಡಾಗಲೂ ಸೂಕ್ತ ಪ್ರತಿಭಟನೆ ವ್ಯಕ್ತಪಡಿಸಿಲ್ಲ. ಕೆಲವೇ ಕೆಲವು ದೊಡ್ಡ ಉದ್ಯಮಿಗಳ ರಪ್ತು ವ್ಯವಹಾರಕ್ಕಾಗಿ, ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಾಗಿ ಕೋಟ್ಯಾಂತರ ರೈತರ ಜೀವನೋಪಾಯ ಸರ್ವ ನಾಶ ಮಾಡುವ ಮಾತುಕತೆಗಳು ಆಹಾರ ಭದ್ರತೆ, ಆಹಾರ ಸ್ವಾವಲಂಬನೆ ಅಂತಿಮವಾಗಿ ದೇಶದ ಸಾರ್ವಭೌಮತ್ವವನ್ನು ಅಪಾಯಕಾರಿ ಪರಿಸ್ಥಿತಿಗೆ ಕೊಂಡೊಯ್ಯಲಿದೆ. ವಾನ್ಸ್ ಭೇಟಿ ಹಿನ್ನೆಲೆಯಲ್ಲಿ ಆಮೇರಿಕಾ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ರವರು ಕೃಷಿ ಮಾರುಕಟ್ಟೆ ಮುಕ್ತಗೊಳಿಸುವುದೇ ಭಾರತದ ಮಾತುಕತೆಯಲ್ಲಿ ಪ್ರಮುಖ ಅಧ್ಯತಾ ವಿಷಯವಾಗಿದ್ದು ಯಾವುದೇ ಸುಂಕ ಹಾಗೂ ಇತರೆ ತಡೆಗಳನ್ನು ನಿವಾರಿಸಬೇಕು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಕಲಬುರಗಿ | ಏ.30ರಂದು ಬಸವ ಜಯಂತಿ : ವಚನಗಳ ಕಿರುಪುಸ್ತಕ ಹಂಚಲು ನಿರ್ಧಾರ

“ಅಮೆರಿಕ ಉಪಾಧ್ಯಕ್ಷರ ಜೊತೆ ವಾಣಿಜ್ಯ ಮಾತುಕತೆಗಳನ್ನು ರದ್ದುಪಡಿಸಬೇಕು, ಸುಂಕ ಸಮರದಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಕೂಡಲೇ ಸಂಸತ್ತು ಹಾಗೂ ಶಾಸನಸಭೆಗಳಲ್ಲಿ ಚರ್ಚಿಸಿ ಸೂಕ್ತ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು ಎಂದು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸುತ್ತದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...