ಕಲಬುರಗಿ | ಜಿಲ್ಲೆಯನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಪ್ರತಿಭಟನೆ

Date:

ಜಿಲ್ಲೆಯನ್ನು ತೀವ್ರ ಬರಪೀಡಿತ ಪ್ರದೇಶವೆಂದು ತಕ್ಷಣ ಘೋಷಿಸಿ ಸಮಗ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರತಿಭಟನೆ ಉದ್ದೇಶಿಸಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಮಾತನಾಡಿ, ‘ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಶೇ.25ಕ್ಕಿಂತಲೂ ಕಡಿಮೆ ಬಿತ್ತನೆಯಾಗಿದ್ದು, ಮಳೆಯ ಕೊರತೆಯಿಂದ ರೈತರು ಹಾಗೂ ಕೃಷಿ ಕೂಲಿಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ಯೋಗದ ಕೊರತೆಯಿಂದ ಜನರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಬೀಜ-ಗೊಬ್ಬರ ಕಾಳಸಂತೆಯಲ್ಲಿ ದುಬಾರಿ ದರಕ್ಕೆ ಮಾರಾಟವಾಗುತ್ತಿರುವುದನ್ನು ಸರ್ಕಾರ ನಿಯಂತ್ರಿಸಬೇಕೆಂದು’ ಒತ್ತಾಯಿಸಿದರು.

‘ಅಗತ್ಯ ವಸ್ತುಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಉದ್ಯೋಗ ಸೃಷ್ಟಿ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವಂತಹ ಪರಿಹಾರ ಕಾರ್ಯಗಳನ್ನು ಕೂಡಲೇ ಆರಂಭಿಸಬೇಕೆಂದು’ ಆಗ್ರಹಿಸಿದರು.

‘ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಯಾಗಿಲ್ಲ. ಬಾಕಿ ಉಳಿದಿರುವ ಕೂಲಿಯನ್ನು ಇದೇ ವಾರ ಪಾವತಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು 200 ದಿನಗಳಿಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದರ ಜೊತೆಗೆ ನಗರ ಪ್ರದೇಶಗಳಿಗೂ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರಬೇಕೆಂದು’ ಒತ್ತಾಯಿಸಲಾಯಿತು.

ರೈತರ ಹೊಲದ ವಿವಿಧ ಕೃಷಿ ಚಟುವಟಿಕೆಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಸೇರಿಸಿ, ಕನಿಷ್ಠ 1.5 ಎಕರೆವರೆಗೆ ಕೆಲಸಕ್ಕೆ ಅವಕಾಶ ಕಲ್ಪಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ರಾಜ್ಯ ಸರ್ಕಾರ ಉಚಿತ ಬೀಜ ಹಾಗೂ ಕೇಂದ್ರ ಸರ್ಕಾರ ಉಚಿತ ಗೊಬ್ಬರ ವಿತರಿಸಬೇಕು. ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೇಂದ್ರಗಳನ್ನು ಆರಂಭಿಸಬೇಕೆಂಬ ಬೇಡಿಕೆಯನ್ನೂ ಪಕ್ಷ ಮುಂದಿಟ್ಟಿತು.

ಬರ ಪರಿಹಾರ ಕಾಮಗಾರಿಗಳು ಮಧ್ಯವರ್ತಿಗಳ ಲಾಭದ ಸಾಧನವಾಗದೆ, ಶ್ರಮಿಕರಿಗೆ ನೇರವಾಗಿ ಹೆಚ್ಚಿನ ಆದಾಯ ತರುವ ರೀತಿಯಲ್ಲಿ ರೂಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ಸಂತ್ರಸ್ತೆಗೆ ₹5 ಲಕ್ಷ ಪರಿಹಾರ

ಪ್ರತಿಭಟನೆಯಲ್ಲಿ ಕೆ. ನೀಲಾ, ಡಾ. ಮೀನಾಕ್ಷಿ, ಭೀಮಶೆಟ್ಟಿ ಯಂಪಳ್ಳಿ, ಸುಧಾಮ ಧನ್ನಿ, ಶ್ರೀಮಂತ ಬಿರಾದಾರ, ಚಂದಮ್ಮ, ಗುರು ಚಾಂದಕವಟೆ, ಪ್ರಭು ಪ್ಯಾರಾಬುದ್ದಿ, ಶಾಂತಾ ಘಂಟಿ, ಲವಿತ್ರ ವಸ್ತ್ರದ, ಪಾಂಡುರಂಗ ಮಾವಿನಕರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...