ಕಲಬುರಗಿ | ಬೆಳೆಸಾಲ ಪಡೆದ ರೈತರ ಬೆಳೆ ವಿಮೆ ಕಡ್ಡಾಯ; ಬ್ಯಾಂಕ್‌ಗಳಿಗೆ ಜಿಲ್ಲಾಧಿಕಾರಿ ಸೂಚನೆ

Date:

2026–27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿ ಬೆಳೆಸಾಲ ಪಡೆದ ಎಲ್ಲ ರೈತರ ಬೆಳೆ ವಿಮೆ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲ ರಾಷ್ಟ್ರೀಕೃತ, ಖಾಸಗಿ, ಕರ್ನಾಟಕ ಗ್ರಾಮೀಣ, ಡಿಸಿಸಿ ಬ್ಯಾಂಕ್‌ಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪಿಎಸಿಎಸ್) ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಬುಧವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 1.93 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಹೊಂದಿರುವ ರೈತರಿಗೆ ವಿವಿಧ ಬ್ಯಾಂಕ್‌ಗಳ ಮೂಲಕ ₹3,260 ಕೋಟಿ ಬೆಳೆಸಾಲ ವಿತರಿಸಲಾಗಿದೆ. ಮಾರ್ಗಸೂಚಿಯಂತೆ ಬೆಳೆಸಾಲ ಪಡೆದ ಪ್ರತಿಯೊಬ್ಬ ರೈತನಿಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಕಡ್ಡಾಯವಾಗಿದ್ದು, ಯಾವುದೇ ಅರ್ಹ ರೈತ ಯೋಜನೆಯಿಂದ ವಂಚಿತರಾಗದಂತೆ ಬ್ಯಾಂಕ್‌ಗಳು ಮತ್ತು ಸಂಬಂಧಿತ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

‘ಬೆಳೆಸಾಲ ಪಡೆದ ರೈತರ ಪರವಾಗಿ ವಿಮಾ ಕಂತನ್ನು ಬ್ಯಾಂಕ್‌ಗಳು ಅಥವಾ ಸಾಲ ನೀಡಿದ ಸಂಸ್ಥೆಗಳು ವಿಮಾ ಕಂಪನಿಗೆ ಪಾವತಿಸದಿದ್ದರೆ, ಬೆಳೆ ಹಾನಿಯಾದ ಸಂದರ್ಭದಲ್ಲಿ ಪರಿಹಾರ ನೀಡುವ ಜವಾಬ್ದಾರಿ ಸಂಬಂಧಿತ ಬ್ಯಾಂಕ್ ಅಥವಾ ಸಂಸ್ಥೆಯದ್ದೇ ಆಗಿರುತ್ತದೆ’ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

‘ಜಿಲ್ಲೆಯಲ್ಲಿ ಇದುವರೆಗೆ ಕೇವಲ 9,980 ರೈತರ ಬೆಳೆ ವಿಮೆ ನೋಂದಣಿಯಾಗಿದ್ದು, ಜುಲೈ 31 ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಶೇ.100ರಷ್ಟು ಬೆಳೆಸಾಲ ಪಡೆದ ರೈತರನ್ನು ವಿಮೆ ವ್ಯಾಪ್ತಿಗೆ ತರಲು ಬ್ಯಾಂಕ್‌ವಾರು ಗುರಿ ನಿಗದಿಪಡಿಸಿ ಕಾರ್ಯಪ್ರವೃತ್ತರಾಗುವಂತೆ’ ಸೂಚಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಮಾತನಾಡಿ, ‘ಬೆಳೆ ವಿಮೆ ಯೋಜನೆಯ ಮಹತ್ವ, ನೋಂದಣಿ ಪ್ರಕ್ರಿಯೆ ಹಾಗೂ ರೈತರಿಗೆ ದೊರೆಯುವ ಪ್ರಯೋಜನಗಳ ಕುರಿತು ವಿವರಿಸಿ, ಜಿಲ್ಲೆಯ ಎಲ್ಲ ಅರ್ಹ ರೈತರನ್ನು ನಿಗದಿತ ಅವಧಿಯೊಳಗೆ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ’ ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು; ರೈತರ ಪ್ರತಿಭಟನೆ

ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಸಹಕಾರ ಸಂಘಗಳ ಉಪನಿಬಂಧಕರು, ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು, ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಹಾಗೂ ಜಿಲ್ಲೆಯ ಪಿಎಸಿಎಸ್ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...