ಕಲಬುರಗಿ | ವಕೀಲರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳಿಗೆ ಕಡಿವಾಣ ಹಾಕಿ: ಸಂರಕ್ಷಣಾ ಕಾಯ್ದೆ ಬಲಪಡಿಸಲು ಆಗ್ರಹ

Date:

ವಕೀಲರ ಮೇಲಿನ ಹಲ್ಲೆ, ದೌರ್ಜನ್ಯ, ಬೆದರಿಕೆ ಹಾಗೂ ಕೊಲೆ ಪ್ರಕರಣಗಳನ್ನು ತಡೆಗಟ್ಟುವಂತೆ ಮತ್ತು ವಕೀಲರ ಸಂರಕ್ಷಣಾ ಕಾಯ್ದೆಯನ್ನು ಬಲಪಡಿಸುವಂತೆ ಆಗ್ರಹಿಸಿ ಗುಲ್ಬರ್ಗಾ ನ್ಯಾಯವಾದಿಗಳ ಸಂಘದ ವತಿಯಿಂದ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

- Advertisement -

ವಕೀಲರು ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಅಂಗವಾಗಿದ್ದು, ನ್ಯಾಯ ಮತ್ತು ಕಾನೂನಿನ ರಕ್ಷಣೆಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ವಕೀಲರ ಮೇಲೆಯೇ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸೂಕ್ತ ಭದ್ರತೆಯ ಕೊರತೆಯಿಂದ ವಕೀಲರು ನಿರ್ಭೀತಿಯಿಂದ ವೃತ್ತಿ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ವಕೀಲರ ಮೇಲಿನ ಹಲ್ಲೆ, ದೌರ್ಜನ್ಯ, ಬೆದರಿಕೆ ಹಾಗೂ ಹತ್ಯೆ ಪ್ರಕರಣಗಳನ್ನು ಜಾಮೀನು ರಹಿತ ಅಪರಾಧಗಳೆಂದು ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಜೈಲು ಶಿಕ್ಷೆ ಹಾಗೂ ಭಾರಿ ದಂಡ ವಿಧಿಸುವ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

Advertisements

ಇಂತಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಿ, ನಿಗದಿತ ಅವಧಿಯಲ್ಲಿ ಇತ್ಯರ್ಥಪಡಿಸಬೇಕು. ರಾಜ್ಯದ ಎಲ್ಲ ನ್ಯಾಯಾಲಯಗಳ ಆವರಣದಲ್ಲಿ ಮೆಟಲ್ ಡಿಟೆಕ್ಟರ್ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಬಿಗಿ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಕೀಲರ ಜೀವ ಮತ್ತು ವೃತ್ತಿ ಭದ್ರತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು. ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ವಿಳಂಬ ಧೋರಣೆ ಕೈಬಿಟ್ಟು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಂಘ ಸರ್ಕಾರವನ್ನು ಒತ್ತಾಯಿಸಿತು.

ಇದನ್ನು ಓದಿದ್ದೀರಾ? ಕಲಬುರಗಿ | ಕಾರ್ಮಿಕನ ಮೇಲೆ ಯಂತ್ರ ಬಿದ್ದು ಸಾವು, ಇಬ್ಬರಿಗೆ ಗಾಯ

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್.ವಿ. ಪಾಸರ್ (ಮಹಾಗಾಂವ್), ಉಪಾಧ್ಯಕ್ಷ ಭೀಮಾಶಂಕರ ಎಲ್. ಪೂಜಾರಿ, ಖಜಾಂಚಿ ಮಂಜುನಾಥ್ ಜಿ. ಪಾಟೀಲ್, ಪ್ರಧಾನ ಕಾರ್ಯದರ್ಶಿ ಸಿದ್ದರಾಮ್ ಬಿ. ವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ...

ಮೈಸೂರು | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ

ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕೊತ್ತಾಯಗಳನ್ನು ಈಡೇರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...

ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ...

ಕೋಲಾರ | ಹಾಲು ಉತ್ಪಾದಕರಿಗೆ ದೀಪಾವಳಿ ಉಡುಗೊರೆ: ಪ್ರತಿ ಲೀಟರ್ ಹಾಲಿಗೆ ₹8 ಹೆಚ್ಚಳ – ಕೆ.ವೈ. ನಂಜೇಗೌಡ

ಹಾಲು ಉತ್ಪಾದಕ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಪ್ರತಿ ಲೀಟರ್ ಹಾಲಿಗೆ...