ಕಲಬುರಗಿ | ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಂಧನಕ್ಕೆ ದಲಿತ ಮುಖಂಡರ ಆಗ್ರಹ

Date:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಲಬುರಗಿಯ ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ “ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಠೋಡ್‌ಗೆ ಫೋನ್ ಕರೆ ಮಾಡಿ ʼನಿಮ್ಮ ಮೇಲೆ 40 ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣʼ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, “ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು, ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎನ್ನುವ ಮಾತುಗಳು ಆಡಿಯೋದಲ್ಲಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಲಿತ ಮುಖಂಡರು ಈ ಕುರಿತು ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದು, “ಉಡಾಫೆ ಮಾತಗಳನ್ನು ಆಡುತ್ತಾ ಇಂದು ಕೊಲೆ ಬೆದರಿಕೆ ಹಾಕುವ ಮಟ್ಟಕ್ಕೆ ರೌಡಿಶೀಟರ್‌ನನ್ನು ಬೀದಿಗೆ ಬಿಟ್ಟಿದ್ದಾರೆ. ಕೂಡಲೇ ಅವನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಬೃಹತ್ ಹೋರಾಟ ಮಾಡಲಾಗುವುದು” ಎಂದು ದಲಿತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬಿಜೆಪಿ ಲೂಟಿಯಿಂದ ಕರ್ನಾಟಕ ರಕ್ಷಿಸಲು ಕಾಂಗ್ರೆಸ್‌ಗೆ ಮತ ನೀಡಿ : ಸೋನಿಯಾ ಗಾಂಧಿ

ರೌಡಿಶೀಟರ್ ಮಣಿಕಂಠನ ಮೇಲೆ ಈಗಾಗಲೆ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಲಬುರಗಿ ಎಸ್‌ಪಿ ಆಶ್ವಾಸನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಣಮಂತ ಯಳಸಂಗಿ, ಬಸಣ್ಣ ಸಿಂಗೆ, ಅಶ್ವಿನಿ ಮದನಕರ, ಲಕ್ಷ್ಮೀಕಾಂತ ಹುಬ್ಳಿ, ದತ್ತತ್ರೆಯ ಇಕ್ಕಳಕಿ, ಸಂತೋಷ ಮೆಲ್ಮನಿ, ದಿಲೀಪ್ ಕಾಯಂಕರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...