ಕಲಬುರಗಿ | ಆರ್‌ಎಸ್‌ಎಸ್ ನಿಷೇಧಿಸುವಂತೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಬೃಹತ್ ಪ್ರತಿಭಟನೆ

Date:

“ಆರ್‌ಎಸ್‌ಎಸ್ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿ, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಜೇವರ್ಗಿ ಪಟ್ಟಣದ ತಹಶಿಲ್ದಾರರ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ವಿವಿಧ ಸಂಘಟನೆಗಳ ನಾಯಕರು ಮತ್ತು ಸದಸ್ಯರು ಭಾಗವಹಿಸಿ ಆರ್‌ಎಸ್‌ಎಸ್ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ತಾಲ್ಲೂಕು ದಂಡಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
421549

ಪ್ರತಿಭಟನೆಯಲ್ಲಿ ಸುರೇಶ ಹಾದಿಮನಿ, ಗುರುರಾಜ ಎಸ್. ಸುಬೇದಾರ್, ಶ್ರಿಹರಿ ಕರಕಿಹಳ್ಳಿ, ಸಿದ್ದು ಕೇರೂರ್, ನಿಜಲಿಂಗ ದೊಡ್ಡಮನಿ, ಆಶೋಕ ದೊಡ್ಡಮನಿ, ಅಬ್ದುಲ್ ಗನಿ, ಮೊಹಿಯುದ್ದೀನ್, ಸಿದ್ರಾಮ ಕಟ್ಟಿ, ಭೀಮರಾಯ ನಗನೂರ್ ಸೇರಿದಂತೆ ಹಲವಾರು ನಾಯಕರು ಮಾತನಾಡಿ, ಆರ್‌ಎಸ್‌ಎಸ್ ಸಂಘಟನೆ ಕಾನೂನುಬಾಹಿರವಾಗಿ ಹಾಗೂ ಸಮಾಜದಲ್ಲಿ ವಿಷಬೀಜ ಬಿತ್ತುವಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಕರೆದು, ಆರ್‌ಎಸ್‌ಎಸ್ ನಿಷೇಧ, ಪ್ರಿಯಾಂಕ್ ಖರ್ಗೆ ಸಚಿವರಿಗೂ ಹಾಗೂ ಅವರ ಕುಟುಂಬಕ್ಕೆ ಸರ್ಕಾರದ ಝಡ್ ಶ್ರೇಣಿ ಭದ್ರತೆ, ಜೀವ ಬೆದರಿಕೆ ಪ್ರಕರಣಗಳಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲು, ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ತ್ವರಿತ ನ್ಯಾಯ ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

ಸಮಿತಿಯ ಮುಖಂಡರು, “ಆರ್‌ಎಸ್‌ಎಸ್ ನೂರಾರು ವರ್ಷಗಳಿಂದ ಸಮಾಜಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ದೇಶದಲ್ಲಿ ಕೋಮುವಾದ ಮತ್ತು ಜಾತ್ಯತೀತ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧರಿಸಿ ಸರಕಾರಿ ವೈದ್ಯಾಧಿಕಾರಿ ಭಾಗಿ

ಪ್ರತಿಭಟನೆಯ ವೇಳೆ ಸಾರ್ವಜನಿಕರಿಗೆ ಉದ್ದೇಶವನ್ನು ತಿಳಿಸುತ್ತಾ, ಸಂಘಟನೆಗಳು ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಭೀಮರಾಯ ನಗನೂರ್, ಶಿವಶರಣಪ್ಪ ಮಾರಡಗಿ, ಗುಂಡಪ್ಪ ಜಡಗಿ, ಪರಮಾನಂದ ಯಲಗೋಡ, ಶಿವಕುಮಾರ್ ಹೆಗಡೆ, ಮಲ್ಲಣ್ಣ ಕೊಡಚಿ, ರವಿ ಕುರಳಗೇರಾ, ಮಾಪಣ್ಣ ಕಟ್ಟಿ, ಮಲ್ಲಿಕಾರ್ಜುನ ಕೆಲ್ಲೂರ್, ಮಹೇಶ ಕೋಕಿಲೆ, ಗುಂಡಪ್ಪ ಜಡಗಿ, ಗುರುಲಿಂಗಪ್ಪ ಗುಡೂರ, ಸಿದ್ದು ಶರ್ಮಾ, ಭೀಮರಾಯ ಬಳಬಟ್ಟಿ, ವಿಶ್ವರಾಧ್ಯ ಗೋಪಾಲಕರ, ಭಾಗಣ್ಣ ಕಟ್ಟಿ, ಮಿಲಿಂದ್ ಸಾಗರ್, ಪ್ರಕಾಶ್ ಮಾರಡಗಿ, ಬಸವರಾಜ್ ಮತ್ತಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...