ಕಲಬುರಗಿ | ನಕಲಿ ಬೇಡ ಜಂಗಮರ ವಿರುದ್ಧ ಕಠಿಣ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Date:

ವೀರಶೈವ ಜಂಗಮರು ನಕಲಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದು ವಂಚಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ನೇತ್ರತ್ವದಲ್ಲಿ ನಗರದಲ್ಲಿ ಜನ ಜಾಗೃತಿ ಹಾಗೂ ಪ್ರತಿಭಟನೆ ನಡೆಯಿತು.

- Advertisement -

ಕಲಬುರಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಜಗತ್) ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ ಮಾತನಾಡಿ, ʼಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ ಲಿಂಗಾಯತ ಜಂಗಮರು ಬೇಡ ಜಂಗಮರು ಅಲ್ಲ, ಬುಡ್ಗ ಜಂಗಮರು ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ನಾವು ಸ್ವಾಗತಿಸುತ್ತೇವೆ. ಆದರೆ, ಅಸ್ಪೃಶ್ಯತೆ ಆಚರಿಸುವ ಲಿಂಗಾಯತ ಜಂಗಮರು (ಕೆಲವರು) ಮರ್ಯಾದೆ ಇಲ್ಲದೆ ಬೇಡ ಜಂಗಮರೆಂದು ಪರಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವುದು ಕಾನೂನಿನ ಬಾಹಿರ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆʼ ಎಂದರು.

ʼಕಲಬುರಗಿಯ ಪೀಠವು ಬೀದರನ ರವೀಂದ್ರ ಸ್ವಾಮಿ ಎಂಬುವವರು ಸಲ್ಲಿಸಿದ್ದ ರೀಟ್ ಮೇಲ್ಮನವಿಯಲ್ಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಜಂಗಮರು ಎಂಬ ಜಾತಿ ಹೆಸರು ಒಂದೇ ತರಹ ಇದ್ದರೆ ಆ ಜಾತಿಗಳಿಗೆ ಪರಶಿಷ್ಟ ಜಾತಿಗೆ ಸಿಗುವ ಅವಕಾಶಗಳು ನೀಡಬಾರದು ಎಂದು ಸುಪ್ರೀಮ್ ಕೋರ್ಟ್ ಪ್ರಭುದೇವ ಮಲ್ಲಿಕಾರ್ಜುನಯ್ಯ ಮತ್ತು ರಾಮಚಂದ್ರ ವಿರಪ್ಪ ಪ್ರಕರಣದಲ್ಲಿ ತೀರ್ಪು ನೀಡಿದೆ’ ಎಂದು ಹೇಳಿದರು

ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಡಾ. ರವೀಂದ್ರನಾಥ ಅವರ ಅವಧಿಯ ಆಧಾರದ ಮೇಲೆ 1,097 ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ಮೇಲೆ ಮತ್ತು 165 ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ತಹಸೀಲ್ದಾರರ ಮೇಲೆ ಕ್ರಮ ಜರುಗಿಸಿ ವಿಶ್ವನಾಥ ಪಿಳ್ಳೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಪರಶಿಷ್ಟ ಜಾತಿ ಮತ್ತು ಪರಶಿಷ್ಟ ಪಂಗಡಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ನೌಕರಿ ಪಡೆದರೆ ಅವರನ್ನು ವಿಚಾರಣೆ ಇಲ್ಲದೆ ವಜಾ ಮಾಡಬೇಕು. ನಕಲಿ ಜಾತಿ ಪಡೆದವರು ಸೇವೆಯಿಂದ ನಿವೃತ್ತಿ ಹೊಂದಿದರೂ ಅವರ ಮೇಲೆ ಪ್ರಕರಣ ದಾಖಲಾಗುತ್ತದೆ. ಅವರ ಸೇವಾ ಅವಧಿಯ ಸಂಬಳ ಮತ್ತು ನಿವೃತ್ತಿ ಬಳಿಕದ ಪಿಂಚಣಿ ವಸೂಲಿ ಮಾಡಬಹುದು. ಇಂತಹ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಸ್ತ್ರವನ್ನು ಪ್ರಯೋಗಿಸಬೇಕುʼ ಎಂದು ಒತ್ತಾಯಿಸಿದರು.

ಒಂಬತ್ತು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರಕಾರಿ ಸಿಬ್ಬಂದಿಗೆ ಮುಂಬಡ್ತಿಯಲ್ಲಿ ವಂಚನೆಯಾಗಿದ್ದು, ಕೆಲವು ಇಲಾಖೆಯ ಜಾತಿವಾದಿ ಹಿರಿಯ ಅಧಿಕಾರಿಗಳು, ಮೀಸಲಾತಿಯ ರೋಸ್ಟ‌ರ್ ಉಲ್ಲಂಘಿಸಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರು ಮುಂಬಡ್ತಿಯಿಂದ ವಂಚಿತರಾಗಿದ್ದಾರೆ. ಈ ಅನ್ಯಾಯವನ್ನು ಸರಿಪಡಿಸಲು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಮುಂಬಡ್ತಿಯಲ್ಲಾದ ಅನ್ಯಾಯವನ್ನು ಸರಿಪಡಿಸಲು ತಮಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿರುವ ಅಂಶಗಳ ಬಗ್ಗೆ ಕೂಡಲೇ ಕ್ರಮ ತೆಗೆದುಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿ ಆಗ್ರಹಿಸಿದರು.

ಬುಡ್ಗ ಜಂಗಮ ಸಮುದಾಯದವರು ವೇಷ ಭೂಷಣದೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಗಮನ ಸೆಳೆಯಿತು.

ಇದನ್ನೂ ಓದಿ : ಬೀದರ್‌ | ಮದ್ಯಪಾನ ಮಾಡಿ ವಾಹನ ಚಾಲನೆ : ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ

ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ, ಬುಡ್ಗ ಜಂಗಮ ಜಿಲ್ಲಾಧ್ಯಕ್ಷ, ಪಂಡಿತ ಸುರಾವತಿ, ಜಿಲ್ಲಾ ಸಂಚಾಲಕ ಮಹಾಂತೇಶ ಬಡದಾಳ, ಯಾದಗಿರ ಜಿಲ್ಲಾ ಸಂಚಾಲಕ ಡಾ.ಮಲ್ಲಿಕಾರ್ಜುನ ಆಶನಾಳ, ಕಲಬುರಗಿ ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಖನ್ನಾ ಸೇರಿದಂತೆ ಪ್ರಮುಖರಾದ ರಾಜಕುಮಾರ ನಿಂಬಾಳ, ಸೂರ್ಯಕಾಂತ ಅಜಾದಪೂರ, ಶಿವಕುಮಾರ ಕೊರಳ್ಳಿ, ಅಜ್ಜಿಸಾಬ ಐಕೂರ, ಮಲ್ಲಿಕಾರ್ಜುನ ಕುರಕುಂದಿ, ಮಲ್ಲಿಕಾರ್ಜುನ ಶಾಖಾನವರ, ಲಿಂಗಣ್ಣಾ ಮಳ್ಳಳ್ಳಿ, ಶೇಖರ ಜೀವಣಗಿ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...