ಕಲಬುರಗಿ | ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ

Date:

ಶಹಾಬಾದ್ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಹಾಗೂ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಆರ್) ಶಹಾಬಾದ್ ತಾಲೂಕು ಸಮಿತಿಯ ನೇತೃತ್ವದಲ್ಲಿ ಬುಧವಾರ ನಗರಸಭೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

- Advertisement -

ಪ್ರತಿಭಟನೆಯ ಬಳಿಕ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನಗರಸಭೆಯಲ್ಲಿ ಸುಮಾರು 15 ದಿನಗೂಲಿ ಹಾಗೂ 40ಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದು, ದಿನಗೂಲಿ ನೌಕರರಿಗೆ 14 ತಿಂಗಳು ಹಾಗೂ ಹೊರಗುತ್ತಿಗೆ ನೌಕರರಿಗೆ 12 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಮರೆಪ್ಪ ಹಳ್ಳಿ ಮಾತನಾಡಿ, ವೇತನ ಸಿಗದ ಕಾರಣ ಕಾರ್ಮಿಕರು ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಮನೆ ಬಾಡಿಗೆ ಸೇರಿದಂತೆ ದೈನಂದಿನ ಜೀವನ ನಡೆಸಲು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ತಿಂಗಳು ವೇತನ ಪಾವತಿಸಬೇಕಾದ ಅಧಿಕಾರಿಗಳು ತೆರಿಗೆ ವಸೂಲಿ ಆಗಿಲ್ಲ ಎಂಬ ಕಾರಣ ನೀಡಿ ವೇತನ ಬಿಡುಗಡೆ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ನಗರಸಭೆಯ ಲೆಕ್ಕ ಶಾಖೆಯ (ಇಎಸ್‌ಟಿ) ಸಿಬ್ಬಂದಿ ನಾರಾಯಣ ರೆಡ್ಡಿ ಅವರ ನಿರ್ಲಕ್ಷ್ಯದಿಂದ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೇರ ಪಾವತಿ ವ್ಯವಸ್ಥೆ ಜಾರಿಗೆ ಸಂಬಂಧಿಸಿ ನಾಲ್ಕು ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ಆರೋಪಿಸಿತು.

ಜುಲೈ 16ರಂದು ಸಲ್ಲಿಸಿದ್ದ ಮನವಿಗೂ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ದಿನಗೂಲಿ ನೌಕರರ ನಾಲ್ಕು ವರ್ಷದ ಬಾಕಿ ವೇತನ ಬಿಡುಗಡೆ, ಹೊರಗುತ್ತಿಗೆ ನೌಕರರಿಗೆ 12 ತಿಂಗಳ ಬಾಕಿ ವೇತನ ಪಾವತಿ, ಹಾಜರಾತಿ ನಿಯಮಿತಗೊಳಿಸುವುದು, ದಿನಗೂಲಿ ಹಾಗೂ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು ಹಾಗೂ ಲೆಕ್ಕ ಶಾಖೆಯ ಸಿಬ್ಬಂದಿ ನಾರಾಯಣ ರೆಡ್ಡಿ ಅವರನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಲಾಯಿತು.

ಧರಣಿ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ತಹಸೀಲ್ದಾರ ಹಾಗೂ ಪೌರಾಯುಕ್ತರು ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ನೌಕರರ ವೇತನವನ್ನು ನೇರ ಪಾವತಿ ವ್ಯವಸ್ಥೆಯ ಮೂಲಕ ನೀಡಲಾಗುವುದು ಹಾಗೂ ಒಂದು ತಿಂಗಳೊಳಗೆ ಬಾಕಿ ಮೂರು ತಿಂಗಳ ವೇತನವನ್ನು ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆ ದಲಿತ ಸಂಘರ್ಷ ಸಮಿತಿ ಧರಣಿಯನ್ನು ಕೈ ಬಿಡಲಾಯಿತು.

ಧರಣಿಯಲ್ಲಿ ಜಿಲ್ಲಾ ಸಂಚಾಲಕ ಮರೆಪ್ಪ ಮೇತ್ರ, ಪೂಜಪ್ಪ ಮೇತ್ರ, ಮಲ್ಲಣ್ಣ ಮಸ್ಕಿ ಮಾತನಾಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮಕ್ಕಳಲ್ಲಿ ಸಂಗೀತ ಪ್ರತಿಭೆ ಬೆಳೆಸುವ ನಾದಮಯ ಟ್ರಸ್ಟ್ ಕಾರ್ಯ ಶ್ಲಾಘನೀಯ

ಈ ಸಂದರ್ಭದಲ್ಲಿ ಶಿವಮೂರ್ತಿ ಪಟ್ಟೇದಾರ, ಮಲ್ಲಿಕಾರ್ಜುನ ಹಳ್ಳಿ, ಮಲ್ಲಿಕಾರ್ಜುನ ಪಾಟೀಲ, ಮಲ್ಲಣ್ಣ ಮರತೂರ, ಮಲ್ಲಿಕಾರ್ಜುನ ಹಳ್ಳಿ, ನರಸಿಂಹಲು ರಾಯಚೂರಕರ, ಮಲ್ಲಿಕಾರ್ಜುನ ಪೋ. ಪಾಟೀಲ್, ಮಲ್ಲಿಕಾರ್ಜುನ ಕಟ್ಟಿ, ಹಣಮಂತ ಪವರ, ಈರಣ್ಣ ಕುರಿ, ಅನೀಲ ಹೊನಗುಂಟಿಕರ್, ಮಲ್ಲಿನಾಥ್ ಭೈರಾಮಡಗಿ, ಬಲಭೀಮ ಪವರ, ಮಹೇಬೂಬ, ಸಚಿನ್ ಎಸ್ ಗಿರನೂರ, ಗೌತಮ್ ನಿಂಬರ್ಗಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ದಿನಗೂಲಿ ಮತ್ತು ಹೊರಗುತ್ತಿಗೆ ನೌಕರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...