ಕಲಬುರಗಿ | ಆರ್‌ಎಸ್‌ಎಸ್ ಕುತಂತ್ರದ ವಿರುದ್ಧ ಜೇವರ್ಗಿಯಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರತಿಭಟನೆ

Date:

ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ಆರ್‌ಎಸ್ಎಸ್ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ತಾಲೂಕು ಸಮಿತಿ, ಜೇವರ್ಗಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ತಾಲೂಕು ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಮಾತನಾಡಿದ ಸಮಿತಿ ಸಂಚಾಲಕ ಶ್ರೀಹರಿ ಕರಕಿಹಳ್ಳಿ ಅವರು, “1950ರ ದಶಕದಲ್ಲಿಯೇ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಆರ್.ಎಸ್.ಎಸ್ ಮತ್ತು ವಿಶ್ವ ಹಿಂದೂ ಮಹಾಸಭೆಯಂತಹ ಸಂಘಟನೆಗಳ ವಿರುದ್ಧ ಎಚ್ಚರಿಕೆ ನೀಡಿದ್ದರು. ಸಂವಿಧಾನ ಜಾರಿಯಾದ ಬಳಿಕ ಆರ್.ಎಸ್.ಎಸ್ ತನ್ನ ಪತ್ರಿಕೆಯಲ್ಲಿ ಸಂವಿಧಾನದ ವಿರುದ್ಧ ಟೀಕೆ ಮಾಡಿತ್ತು. ಇದರಿಂದಲೇ ಮನುವಾದಿ ಮನೋಭಾವವು ಬಯಲಾಗುತ್ತದೆ,” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಅವರು ಮುಂದುವರೆದು, “ಹಿಂದೂ ಮಹಿಳೆಯರಿಗೆ ಸಮಾನ ಹಕ್ಕು ನೀಡಲು ಬಾಬಾ ಸಾಹೇಬ ಅಂಬೇಡ್ಕರ್ ಹೋರಾಡುತ್ತಿದ್ದಾಗ, ಆರ್.ಎಸ್.ಎಸ್ ಹಿಂದೂ ಕೋಡ್ ಬಿಲ್ ಪ್ರತಿಯನ್ನು ಸುಟ್ಟುಹಾಕಿ ವಿರೋಧಿಸಿತ್ತು. ಇತ್ತಿಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಸ್ಟಿಸ್ ಗವಾಯಿಯವರ ಮೇಲೆ ಶೂ ಎಸೆದ ಘಟನೆ ಕೂಡಾ ಅದೇ ಮನೋಭಾವದ ಪ್ರತಿಫಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಮನುವಾದಿ ಶಕ್ತಿಗಳು ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಬೆದರಿಸುತ್ತಿವೆ. ಇಂತಹ ಅಂಶಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ ? ಕಲಬುರಗಿ | ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ ವಿಚಾರಣೆ ನ.13ಕ್ಕೆ ಮುಂದೂಡಿಕೆ

ಮನವಿಯಲ್ಲಿ ಮುಖ್ಯ ಬೇಡಿಕೆಗಳಾಗಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರು ಇಡುವುದು, ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಪ್ರಕಾರ ಜೀವಾವಧಿ ಶಿಕ್ಷೆ ನೀಡುವುದು, ಹಾಗೂ ಚಿತ್ತಾಪುರದಲ್ಲಿ ಅನುಮತಿ ಇಲ್ಲದೆ ಪಥಸಂಚಲನ ನಡೆಸಿದರೆ ಆರ್.ಎಸ್.ಎಸ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿದ್ದು ಕೆರೂರ, ಜೈಭೀಮ ನರಿಬೋಳ, ರೆವಣಸಿದ್ದಪ್ಪ ಬಿರಾಳ, ಬಸವರಾಜ ವರ್ಚನಳ್ಳಿ, ಭೀರಲಿಂಗ ಕೆಲ್ಲೂರ, ಯಶವಂತ ಬಡಿಗೇರ, ಶ್ರೀಮಂತ ಕಿಲೇದಾರ, ಶರಣಬಸಪ್ಪ ಲಖಣಾಪೂರ, ಲಕ್ಷ್ಮಣ, ಬಲರಾಮ ಹರನೂರ, ಸಾಯಬಣ್ಣ ಹರನಾಳ, ಅಮೋಘ ಸಿದ್ದ, ರವಿ ಕುರಳಗೇರಾ, ಭೀಮರಾಯ ಹರನಾಳ, ಶೇಖರ ಹಿಪ್ಪರಗಿ, ಚಂದ್ರಕಾಂತ ರದ್ದೆವಾಡಗಿ, ಸಂತೋಷ ಹಿಪ್ಪರಗಿ, ಗೌತಮ ಹೊಸಮನಿ, ಹಣಮಂತ ಎಸ್ ಅಂಬರಖೇಡ, ಹಣಮಂತ ಅಂಬರಖೇಡ, ಬಾಬು ಹಿಪ್ಪರಗಿ ಇನ್ನಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...