ಕಲಬುರಗಿ | ಕವಲಗಾ ಗ್ರಾಮ ಪಂಚಾಯಿತಿ ಅಕ್ರಮ ಖಂಡಿಸಿ ದಲಿತ ಸೇನೆ ಆಗ್ರಹ

Date:

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕವಲಗಾ ಗ್ರಾಮ ಪಂಚಾಯತಿಯಲ್ಲಿ 2022-23-24ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯಡಿಯಲ್ಲಿ ಮೋಟಾರ್ ಖರೀದಿ ಮತ್ತು ದುರಸ್ತಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದೆ ಏಜೆನ್ಸಿಗಳ ಮುಖಾಂತರ ಹಣ ದುರ್ಬಳಕೆ ಮಾಡಿದ್ದಾರೆ ಎಂದು ದಲಿತ ಸೇನೆ ಆರೋಪಿಸಿದೆ.

- Advertisement -

ಕವಲಗಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮ ಖಂಡಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸೇನೆ ಆಳಂದ ತಾಲೂಕು ಸಮಿತಿ ವತಿಯಿಂದ ಕಲಬುರಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಕವಲಗಾ ಗ್ರಾಮ ಪಂಚಾಯಿತಿಯಲ್ಲಿ 2022, 2023-24ನೇ ಸಾಲಿನಲ್ಲಿ ಬಂದ 15ನೇ ಹಣಕಾಸು, ಶೇ.5 ಪ್ರತಿಶತ ಮನರೇಗಾ ಕರವಸೂಲಿ ಮತ್ತು ಎಸ್‌ಸಿ/ಎಸ್‌ಟಿ ಹಾಗೂ ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಮಾಡಿ ಲೂಟಿ ಹೊಡೆದಿರುವದನ್ನು ಖಂಡಿಸಿ ತನಿಖೆ ಮಾಡಿ ತಪ್ಪಿಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ಮನರೇಗಾ ಕೂಲಿ ಕಾರ್ಮಿಕರಿಗೆ ವೇತನ ಪಾವತಿಸದೆ ಸತಾಯಿಸುತ್ತಿದ್ದು, 2019-20ನೇ ಸಾಲಿನ ವಸತಿ ಯೋಜನೆಯಲ್ಲಿ ಸರ್ಕಾರಿ ನೌಕರ ಕುಟುಂಬದ ಹೆಸರಿನಲ್ಲಿ ಫಲಾನುಭವಿ ಹೆಸರಿಗೆ ಹಂಚಿಕೆಯಾದ ಮನೆಗಳನ್ನು ಬೇರೊಬ್ಬರ ಜಾಗದಲ್ಲಿ ನಿರ್ಮಿಸಿದ್ದು, ಅರ್ಹ ಫಲಾನುಭವಿಗಳಿಗೆ ಅನ್ಯಾಯ ಮಾಡಿದ್ದಾರೆ” ಎಂದು ಆರೋಪಿಸಿದರು.

“ಅಕ್ರಮಗಳ ಕುರಿತಂತೆ ಹಲವು ಬಾರಿ ದೂರುಗಳನ್ನು ನೀಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಮನರೇಗಾ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ ಏಜೆನ್ಸಿಗಳ ಮುಖಾಂತರ ರಾಜೇಶ್ವರಿ ಗಣೇಶ ಹಾಗೂ ಇನ್ನಿತರ ಏಜೆನ್ಸಿ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿಸಿ ಹಣ ಎತ್ತಿಕೊಂಡಿದ್ದಾರೆ. ಹೀಗೆ ಬಹುತೇಕ ಅಕ್ರಮಗಳನ್ನು ನಡೆಸಿ ಅನುದಾನವನ್ನು ಲೂಟಿ ಮಾಡಿದ್ದಾರೆ. ಅಂಗವಿಕಲರಿಗಾಗಿ ಬಂದ ಶೇ.5ರಷ್ಟು ಅನುದಾನ ನೀಡದೆ ದುರ್ಬಳಕೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜೊತೆಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗುಲ್ಬರ್ಗಾ ವಿವಿ ಉಪನ್ಯಾಸಕನಿಂದ ಮೊಬೈಲ್‌ನಲ್ಲೇ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ ಬಂದ ಆಡಿಯೋ

“ಎಸ್‌ಸಿ/ಎಸ್‌ಟಿ ಅನುದಾನವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಬೇಕು, ಮನರೇಗಾ ಕೂಲಿ ಕಾರ್ಮಿಕರ ವೇತನ ಪಾವತಿಸಬೇಕು ಮತ್ತು ಕೂಡಲೇ ಕೆಲಸ ಪ್ರಾರಂಭಿಸಬೇಕು. ಅಂಗವಿಕಲರ ಶೇ.5ರಷ್ಟು ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ನೀಡಬೇಕು. ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶರಣು ಕವಲಗಿ, ದತ್ತಾ ಕಡಗಂಚಿ, ದಲಿತ ಸೇನಾ ಉಪಾಧ್ಯಕ್ಷ ದಿಲೀಪ ಮಟಕಿ, ಹಣಮಂತ ಗಾಯಕವಾಡ, ಶಶಿಧರ ನವರಂಗ, ಸಂದೀಪ ಕಾಳೆಕಿಂಗೆ, ಗುಂಡಪ್ಪಾ ಅರಣೋದಯ, ಲಕ್ಷ್ಮಣ ನಿಂಬಾಳ, ನೀಲಪ್ಪಾ ಕಾಂಬಳೆ, ಜೈಭೀಮ್ ಕಂಟೆಕೊರೆ ಮುಸ್ತಾಫಾ ಹಕೀಮಜಿ, ಶಿವಲಿಂಗ ಮಾಡ್ಯಾಳಕರ, ಶಶಿ ನರೋಣೆ, ಧರ್ಮಾ ಜಿ ಬಂಗರಗಿ, ಮಹೇಶ ಕೋಚಿ, ಶಿವಲಿಂಗಪ್ಪಾ ಚನ್ನಗುಂಡ, ಮಂಜು ಸಿಂಗೆ, ವಸಂತ ಕುಮಸಿ, ಸಂದೀಪ ಕಾಂಬಳೆ, ಸಿದ್ದಾರ್ಥ ಗಾಯಕವಾಡ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...