ಕಲಬುರಗಿ | ಆರೆಸ್ಸೆಸ್ ವಿರುದ್ಧ ಕ್ರಮಕ್ಕೆ‌ ದಲಿತ ಸೇನೆ ಆಗ್ರಹ

Date:

ದೇಶದಲ್ಲಿ ನಡೆಯುತ್ತಿರುವ ನ್ಯಾಯಾಂಗದ ಮೇಲಿನ ದಾಳಿ, ಶೋಷಿತ ಸಮುದಾಯದ ಮೇಲಿನ ಅತ್ಯಾಚಾರ, ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಜಾತಿ ತಾರತಮ್ಯ, ಸಚಿವ ಪ್ರಿಯಾಂಕ ಖರ್ಗೆ ತೇಜೋವಧೆ ಮತ್ತು ಸಾರ್ವಜನಿಕವಾಗಿ ನಿಂದನೆ ಮಾಡುತ್ತಿರುವ ರಾ‌ಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆಯ ಕಲಬುರಗಿ ಜಿಲ್ಲಾಧ್ಯಕ್ಷ ಮಂಜುನಾಥ್ ಎಸ್ ಭಂಡಾರಿ ಆಗ್ರಹಿಸಿದ್ದಾರೆ.

- Advertisement -

ನಗರದಲ್ಲಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ. ಬಿ ಆರ್ ಗವಾಯಿಯವರ ಮೇಲೆ ಮನುವಾದಿ ಮನಸ್ಥಿತಿ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿರುವುದು ಅತ್ಯಂತ ಕಳವಳಕಾರಿ ಮತ್ತು ಖಂಡನೀಯವಾಗಿದೆ. ಇದು ಕೇವಲ ವಯಕ್ತಿಕ ದಾಳಿಯಾಗಿರದೆ ನ್ಯಾಯಾಂಗ ವ್ಯವಸ್ಥೆಯ ಘನತೆ, ಸಾರ್ವಭೌಮತೆ ಮತ್ತು ಅಂಬೇಡ್ಕರ್ ಸಿದ್ದಾಂತದ ಮೇಲೆ ನಡೆದ ನೇರ ದಾಳಿಯಾಗಿದೆ. ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಿತ್ತೂರು ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

“ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರಿ ಸಂಸ್ಥೆಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ನಂತರ ಆರೆಸ್ಸೆಸ್ ಮತ್ತು ಕಾರ್ಯಕರ್ತರಿಂದ ವ್ಯವಸ್ಥಿವಾದ ಟಾರ್ಗೆಟ್ ಹಾಗೂ ತೇಜೋವಧೆ ಪ್ರಯತ್ನಗಳಿಗೆ ಒಳಗಾಗಿತ್ತಿರುವುದು ವಿಷಾಧನೀಯ. ಸಾರ್ವಜನಿಕ ಜೀವದಲ್ಲಿರುವ ಜನಪ್ರತಿನಿಧಿಗಳು ತಮ್ಮ ನಿಲುವನ್ನು ವ್ಯಕ್ತಪಡಿಸುತ್ತಿದ್ದುದಕ್ಕಾಗಿ ಬೆದರಿಕೆಗೆ ಗುರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಈ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸಚಿವರ ಸುರಕ್ಷತೆಗೆ ಖಾತ್ರಿ ಪಡಿಸಬೇಕು” ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...