ಕಲಬುರಗಿ | ರಸ್ತೆಬದಿ ನಿಲ್ಲಿಸುವ ಲಾರಿ ತೆರವುಗೊಳಿಸುವಂತೆ ದಲಿತ ಸೇನೆ ಆಗ್ರಹ

Date:

ಕಲಬುರಗಿ ಜಿಲ್ಲೆ ಸೇಡಂ ಮುಖ್ಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲಿಸಿರುವ ಲಾರಿ ತೆರವುಗೊಳಿಸುವಂತೆ ಆಗ್ರಹಿಸಿ ದಲಿತ ಸೇನೆ ವಲಯ ಅಧ್ಯಕ್ಷ ಭಗವಾನ್ ಬೋಚಿನ್ ಅವರು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಮಳಖೇಡ ಪೊಲೀಸ್ ಠಾಣೆಗೆ ಮನವಿ ಪತ್ರ ಸಲ್ಲಿಸಿದರು.

“ಮಳಖೇಡ ಪಟ್ಟಣದ ಆದಿತ್ಯನಗರದಲ್ಲಿ ರಾಜಶ್ರೀ ಸಿಮೆಂಟ್ ಕಂಪೆನಿ ಇರುವುದರಿಂದ ಕಂಪೆನಿಗೆ ಲಾರಿಗಳು ಹೆಚ್ಚಾಗಿ ಸಂಚಾರ ಮಾಡುತ್ತವೆ. ರಾತ್ರಿ ವೇಳೆ ಸಾಲು ಸಾಲಾಗಿ ಸೇಡಂ ಮುಖ್ಯ ಹೆದ್ದಾರಿಯ ಎರಡೂ ಬದಿಯಲ್ಲಿ ಬೆಳಗಿನ ಜಾವದವರೆಗೆ ಲಾರಿಗಳನ್ನು ನಿಲ್ಲಿಸಿರುತ್ತಾರೆ. ಇದರಿಂದ ಜನರಿಗೆ ಮತ್ತು ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ, ಬೈಕ್ ಸವಾರರಿಗೆ, ಸೈಕಲ್ ಸವಾರರಿಗೆ, ಎತ್ತಿನ ಗಾಡಿಗಳು ಅದೇ ರಸ್ತೆ ಮೂಲಕ ಸಂಚಾರ ಬೆಳೆಸುತ್ತವೆ. ವಿದ್ಯಾರ್ಥಿಗಳು ಅದೇ ರಸ್ತೆ ಮೂಲಕ ಶಾಲಾ-ಕಾಲೇಜುಗಳಿಗೆ ಹೋಗುಬೇಕು. ಈ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ?”  ಎಂದಿದ್ದಾರೆ.

“ಇಂದಿರಾನಗರದಲ್ಲಿ ತಿರುವು ಇರುವುದರಿಂದ ಗಾಡಿಗಳು ಯು ಟರ್ನ್ ಮಾಡಿಕೊಂಡು ಹೋಗುತ್ತವೆ ಇದರಿಂದ ಸೈಕಲ್ ಮೋಟಾರ್ ಆಗಿರಬಹುದು ಹಾಗೂ ಎತ್ತಿನ ಬಂಡಿ ಆಗಿರಬಹುದು ಅಪಘಾತ ಸಂಭವಿಸಬಹುದು. ಹಾಗಾಗಿ ಕೂಡಲೇ ಎಲ್ಲ ಲಾರಿಗಳನ್ನು ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣ; ರೈತರು-ಕೆಪಿಟಿಸಿಎಲ್ ಅಧಿಕಾರಿಗಳ ನಡುವೆ ವಾಗ್ವಾದ

ಅಬ್ದುಲ್ ರಹಿಮಾನ್, ಅನ್ಸರ್, ಶಿವರಾಜ್ ಸಂಗವಿ, ಎಂ ಡಿ ಶಕೀಲ್, ರಾಚಯ್ಯ ಸ್ವಾಮಿ, ಸುನಿಲ್ ದೊಡ್ಡಮನಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ...

ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು...