ಕಲಬುರಗಿ | ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ದಸಂಸ ಪ್ರತಿಭಟನೆ

Date:

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಹೋಮ–ಹವನ ನಡೆಸಿ ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಯಿತು.

- Advertisement -

ದಸಂಸ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ಅವರ ನೇತೃತ್ವದಲ್ಲಿ ಡಾ. ಅಂಬೇಡ್ಕರ್ ಜಗತ್ ವೃತ್ತದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ರಸ್ತೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮನವಿ ಸಲ್ಲಿಸಿ ಹಿರಿಯ ಹೋರಾಟಗಾರ ಡಾ. ಡಿ.ಜಿ. ಸಾಗರ ಮಾತನಾಡಿ, “ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಜಾತಿಯ ಹಿನ್ನೆಲೆಯಲ್ಲಿ ಶುದ್ಧೀಕರಿಸಿ ಹೋಮ–ಹವನ ನಡೆಸಿರುವುದು ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಇದು ಖರ್ಗೆ ಅವರಿಗೆ ಮಾತ್ರ ಮಾಡಿದ ಅವಮಾನವಲ್ಲ, ಶೋಷಿತ ಸಮುದಾಯದ ಆತ್ಮಗೌರವಕ್ಕೆ ಮಾಡಿದ ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಂವಿಧಾನ ಜಾರಿಗೆ ಬಂದು ಹಲವು ದಶಕಗಳು ಕಳೆದರೂ ಅಸ್ಪೃಶ್ಯತೆ ಆಚರಣೆಗಳು ಮುಂದುವರಿದಿರುವುದು ಆತಂಕಕಾರಿ. ಇಂತಹ ಅನಿಷ್ಠ ಆಚರಣೆಗಳಿಗೆ ಕಡಿವಾಣ ಹಾಕಿ, ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.

“ಘಟನೆಯ ಹಿಂದೆ ಇರುವವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಚಿತ್ತಾಪುರ, ಶಹಾಬಾದ್, ಜೇವರ್ಗಿ, ಆಳಂದ, ಅಫಜಲಪುರ, ಕಾಳಗಿ, ಸೇಡಂ, ಕಮಲಾಪುರ ಹಾಗೂ ಚಿಂಚೋಳಿ ಸೇರಿದಂತೆ ವಿವಿಧ ತಾಲೂಕುಗಳಿಂದ ದಸಂಸ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಖರ್ಗೆ ಬಳಸಿದ ಸ್ಥಳ ಶುದ್ಧೀಕರಣ: ಜಾತಿವಾದಿಗಳ ವಿರುದ್ಧ ಕಠಿಣ ಕ್ರಮಕ್ಕೆ ದಸಂಸ ಒತ್ತಾಯ

ಜಿಲ್ಲಾ ಮುಖಂಡರಾದ ಸುರೇಶ ಹಾದಿಮನಿ, ಕೃಷ್ಣಪ್ಪ ಕರಣಿಕ, ರಾಜ್ಯ ಖಜಾಂಚಿ ಬಿ.ಸಿ. ವಾಲಿ, ಎಸ್.ಪಿ. ಸುಳ್ಳದ್, ಹೆಚ್. ಶಂಕರ ಸೇರಿದಂತೆ ಅಂಬಣ್ಣ ಜೀವಣಗಿ, ಅಶೋಕ ಅಂಬಲಗಿ, ಉಮೇಶ ನರೋಣಾ, ರೇವಣಸಿದ್ಧ ಜಾಲಿ, ಮಲ್ಲಣ್ಣ ಕೊಡಚಿ, ಸುಭಾಷ ಡಾಂಗೆ, ಮಹಾದೇವ ತರನಳ್ಳಿ, ತಿಪ್ಪಣ್ಣ ಧನಕರ, ಮಹಾಲಿಂಗ ಅಂಗಡಿ, ಶಿವಶರಣ ಮಾರಡಗಿ, ಮಹೇಂದ್ರ ಕೊಳ್ಳಿ, ಶಿವಪುತ್ರ ರಾಗಿ, ರವಿ ಬಡಿಗೇರ, ದೇವೇಂದ್ರ ಹೆಗ್ಗಡೆ, ಬಾಬುರಾಯ ವಾಲಿ, ದೇವೇಂದ್ರ ದೊಡ್ಡಮನಿ, ಮಹಾದೇವ ನಾಟಕರ್ ಹಾಗೂ ಬಸವರಾಜ ದಂಡೂ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...