ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರ ಹಣ ಅಂದರೆ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳು 2025 26 ನೇ ಸಾಲಿನ 11,896,84ಕೋಟಿ ಹಣ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದಸಂಸ ವತಿಯಿಂದ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸಂಚಾಲಕರದ ಅರ್ಜುನ್ ಭದ್ರೆ ಬೆಂಗಳೂರು ಮತ್ತು ರಾಜ್ಯ ಸಂಘಟನಾ ಸಂಚಾಲಕರಾದ ಮಲ್ಲಿಕಾರ್ಜುನ್ ಕ್ರಾಂತಿ ಬೆಂಗಳೂರು ಅವರ ನೇತೃತ್ವದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯ ಗೃಹ ಮಂತ್ರಿ ಡಾ.ಜಿ ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹಾದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಭೇಟಿಯಾಗಿ ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರ ಹಣ ಅಂದರೆ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳು 2025 26 ನೇ ಸಾಲಿನ 11,896,84ಕೋಟಿ ಹಣ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ರಾಜ್ಯ ಸರಕಾರಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಬೆಂಗಳೂರು ರಾಜ್ಯ ಸಮಿತಿಯು ನಿಯೋಗದೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಇದನ್ನು ಓದಿದ್ದೀರಾ? ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರದ ಪಾಲೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಈ ಸಂದರ್ಭದಲ್ಲಿ ಕಲಬುರಗಿ, ಯಾದಗಿರಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ತಾಲೂಕು ಪದಾಧಿಕಾರಿಗಳ ಹಾಗೂ ಕಾರ್ಯಕರ್ತರು ಇದ್ದರು.