ಕಲಬುರಗಿ | ಅಶ್ವಿನಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸೆ.2ರಂದು ದಸಂಸ ಕ್ರಾಂತಿಕಾರಿ ಧರಣಿ

Date:

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ 21 ವರ್ಷದ ದಲಿತ ಯುವತಿ ಅಶ್ವಿನಿ ಅವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಆಗ್ರಹಿಸಿದೆ.

- Advertisement -

ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಅರ್ಜುನ್ ಭದ್ರೆ, “ಅಶ್ವಿನಿ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ, ಶವವನ್ನು ಬಾವಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಅಭಿಷೇಕ ಸ್ವಾಮಿ ಸೇರಿದಂತೆ ಆರೋಪಿಗಳ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಬೇಕು. ಘಟನೆಯ ಹಿಂದೆ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಪ್ರಭಾವಿ ಶಕ್ತಿಗಳ ಕೈವಾಡವಿದ್ದರೆ ಅದನ್ನು ತನಿಖೆ ಮೂಲಕ ಬಹಿರಂಗಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಅಶ್ವಿನಿ ಅವರಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ಇನ್ನೆರಡು ತಿಂಗಳಲ್ಲಿ ವಿವಾಹ ನಡೆಯಬೇಕಿತ್ತು ಎನ್ನಲಾಗಿದೆ. ಯುವತಿಯ ಸಾವಿನಿಂದ ಕುಟುಂಬ ತೀವ್ರ ಆಘಾತಕ್ಕೊಳಗಾಗಿದ್ದು, ಸರ್ಕಾರ ಸಂತ್ರಸ್ತ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಅರ್ಹ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

“ದಸಂಸ ಕ್ರಾಂತಿಕಾರಿ ನಿಯೋಗವು ಆಗಸ್ಟ್ 23ರಂದು ಹೊಕ್ರಾಣಿ ಗ್ರಾಮಕ್ಕೆ ತೆರಳಿ ಅಶ್ವಿನಿ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಕುಟುಂಬಕ್ಕೆ ನ್ಯಾಯ ದೊರಕಿಸುವ ಹೋರಾಟದಲ್ಲಿ ಸಂಘಟನೆ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಲಾಗಿದೆ” ಎಂದರು.

“ಮಹಿಳೆಯರು ಹಾಗೂ ಬಾಲಕಿಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳ ವಿರುದ್ಧ ಜಾತಿ–ಧರ್ಮದ ಭೇದವಿಲ್ಲದೆ ಸಮಾಜ ಒಗ್ಗಟ್ಟಾಗಿ ಧ್ವನಿ ಎತ್ತಬೇಕು. ದಲಿತ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಮಹಿಳಾ ಪರ ಹಾಗೂ ಪ್ರಗತಿಪರ ಸಂಘಟನೆಗಳು ಪರಿಣಾಮಕಾರಿಯಾಗಿ ಹೋರಾಟ ನಡೆಸಬೇಕು” ಎಂದು ಭದ್ರೆ ಕರೆ ನೀಡಿದರು.

“ಮಹಿಳೆಯರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ತ್ವರಿತಗೊಳಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದರು.

“ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದವರ ಮೇಲೆ ನಡೆದಿರುವ ಇತರ ಕೊಲೆ ಪ್ರಕರಣಗಳನ್ನೂ ಸಮಗ್ರವಾಗಿ ತನಿಖೆ ನಡೆಸಬೇಕು. ದೇವದುರ್ಗ ತಾಲೂಕಿನ ಹದಿನಾಳ ಗ್ರಾಮದ ಬಿಎಸ್‌ಪಿ ಜಿಲ್ಲಾ ಅಧ್ಯಕ್ಷ ಭೂಮಾನಂದರ್ ಹಾಗೂ ಲಿಂಗಸುಗೂರು ಪುರಸಭೆ ವ್ಯಾಪ್ತಿಯ ರಾಣಮ್ಮ ಅವರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಪತ್ತೆಹಚ್ಚಬೇಕು” ಎಂದು ಆಗ್ರಹಿಸಿದರು.

“ಇದೇ ವೇಳೆ ಎಸ್‌ಸಿ/ಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ದಲಿತರು ಮತ್ತು ಆದಿವಾಸಿಗಳ ಅಭಿವೃದ್ಧಿಗಾಗಿಯೇ ಸಂಪೂರ್ಣವಾಗಿ ಬಳಸಬೇಕು. ಅನುದಾನದ ದುರುಪಯೋಗ ಅಥವಾ ಬೇರೆ ಉದ್ದೇಶಗಳಿಗೆ ವರ್ಗಾವಣೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ “ಸೆಪ್ಟೆಂಬರ್ 2ರಂದು ಕಲಬುರಗಿಯ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು” ಎಂದು ಅವರು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಜಿಲ್ಲಾ ಸಂಚಾಲಕರಾದ ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ಆಳಂದ ತಾಲೂಕು ಸಂಚಾಲಕ ಸೈಬಣ್ಣ ಕೋಟನೂರಕರ್ ಹಾಗೂ ಜೇವರ್ಗಿ ತಾಲೂಕು ಸಂಚಾಲಕ ಮಹೇಶ ಕೋಕಿಲೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...