ಕಲಬುರಗಿ | ತರಗತಿವಾರು ಲಭ್ಯವಿರದ ಪಠ್ಯಪುಸ್ತಕ ಒದಗಿಸುವಂತೆ ದಸಂಸ ಆಗ್ರಹ

Date:

ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ದಲಿತ ಸಂಘರ್ಷ ಸಮಿತಿ ಜೇವರ್ಗಿ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ  ಮನವಿ ಪತ್ರ ಸಲ್ಲಿಸಿದರು.

- Advertisement -

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕು ಸಂಚಾಲಕ ಸಿದ್ರಾಮ್ ಕಟ್ಟಿ ಮಾತನಾಡಿ, “ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಗತಿವಾರು ಕೆಲವೊಂದು ಪಠ್ಯ ಪುಸ್ತಕಗಳು ಸರ್ಕಾರದಿಂದ ಬಂದಿಲ್ಲ‌ದಿರುವುದು ವಿದ್ಯಾರ್ಥಿಗಳಿಂದ ದಸಂಸ ಗಮನಕ್ಕೆ ಬಂದಿದೆ. ಆದ್ದರಿಂದ ಪಠ್ಯಭೋದನೆ ಮಾಡಲು ಶಿಕ್ಷಕರಿಗೆ ಮತ್ತು ಅಭ್ಯಾಸ ಮಾಡಲು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಅವಶ್ಯಕ ಇರುವದರಿಂದ, ಶಿಕ್ಷಣ ಸಚಿವರು ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಅಭ್ಯಾಸಕ್ಕೆ ತೊಂದರೆಯಾಗದಂತೆ ತರಗತಿವಾರು ಲಭ್ಯವಿರದ ಪುಸ್ತಕಗಳನ್ನು ಆಯಾ ಶಾಲೆಗಳಿಗೆ ತಲುಪಿಸಲು ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾದೃಷ್ಠಿಯಿಂದ ಸರ್ಕಾರ ಮತ್ತು ಸಚಿವರು ಮುತುವರ್ಜಿ ವಹಿಸಿ ಕೂಡಲೇ ತರಗತಿವಾರು ಲಭ್ಯವಿರದ ಎಲ್ಲ ಪಠ್ಯ ಪುಸ್ತಕಗಳನ್ನು ವಿಲೇವಾರಿ ಮಾಡಲು ಕ್ರಮ ಜರುಗಿಸಬೇಕು. ವಿಳಂಬವಾದರೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಮತ್ತು ಪಾಲಕರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ತೀವ್ರ ಹೋರಾಟ ರೂಪಸಿಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮೈಶುಗರ್‌ ಕಾರ್ಖಾನೆ ಪುನರಾರಂಭ; ಜೂನ್ 23ರಿಂದ ಕಬ್ಬು ಅರೆಯುವಿಕೆಗೆ ಚಾಲನೆ

ಈ ಸಂದರ್ಭದಲ್ಲಿ ದಸಂಸ ಜೇವರ್ಗಿ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ, ಸಂಚಾಲಕರಾದ ಶಿವಕುಮಾರ ಹೆಗಡೆ, ಸಂಗಣ್ಣ ಹೊಸಮನಿ, ಜಟ್ಟೆಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...