ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜೇವರ್ಗಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 16ರಂದು ಯಡ್ರಾಮಿ ತಾಲೂಕು ಮಟ್ಟದ ಕ್ರೀಡಾ ಕೂಟ ಹಾಗೂ ಆಗಸ್ಟ್ 18ರಂದು ಜೇವರ್ಗಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಬೆಳಿಗ್ಗೆ 10 ಗಂಟೆಗೆ ಜೇವರ್ಗಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನೋಂದಾಯಿಸಬೇಕೆಂದು ಹೇಳಿದ್ದಾರೆ.
ʼಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ ಥ್ರೋಬಾಲ್ ಯೋಗ ಕ್ರೀಡೆಗಳು ನಡೆಸಲಾಗುವುದು. ಈ ಕ್ರೀಡಾಕೂಟಗಳಲ್ಲಿ ಆಸಕ್ತ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ. ಕ್ರೀಡಾಪಟುಗಳು ಕರ್ನಾಟಕ ನಿವಾಸಿಗಳಾಗಿರಬೇಕು. ಈ ಕ್ರೀಡೆಗಳಲ್ಲಿ ಭಾಗವಹಿಸುವ ಒಬ್ಬ ಕ್ರೀಡಾಪಟು ಅಥವಾ ಒಂದು ತಂಡ ಒಂದು ಬಾರಿ ಮಾತ್ರವೇ ಪಾಲ್ಗೊಳ್ಳಬಹುದಾಗಿದೆ” ಎಂದು ತಿಳಿಸಿದರು.
“ತಾಲೂಕ ಮಟ್ಟ ಮತ್ತು ಜಿಲ್ಲಾಮಟ್ಟದಲ್ಲಿ ಆ ಕ್ರೀಡಾಕೂಟ ಹೊರತುಪಡಿಸಿ ಬೇರೆ ತಾಲೂಕು ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತಿಲ್ಲ. ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಗುಂಪು ಕ್ರೀಡೆಯಲ್ಲಿ ಪ್ರಥಮ ತಂಡಗಳು ಮಾತ್ರ ಜಿಲ್ಲಾ ಮಟ್ಟಕ್ಕೆ ಅರ್ಹರಾಗಿರುತ್ತಾರೆ. ದಸರಾ ಕ್ರೀಡಾಕೂಟದಲ್ಲಿ ಆಸಕ್ತ ಕ್ರೀಡಾಪಟುಗಳು ಆಗಸ್ಟ್ 15ರಂದು ತಾಲೂಕು ಕ್ರೀಡಾಂಗಣದ ವ್ಯವಸ್ಥಾಪಕ ಸಂಗಮೇಶ್ ಕೊಂಬಿ ಅವರನ್ನು ಮೊ.95356 66606 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.