ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಒಳ ಮತ್ತು ಹೊರ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.
ಸರ್ಕಾರಿ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಡ ಒಳ ಮತ್ತು ಹೊರ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ವೈದ್ಯರು ಸರಿಯಾದ ಸಭಯಕ್ಕೆ ಬಂದು ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಿ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳಿಗಾಗಿ ಇರುವ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪಾಲಕರಿಗೆ ಮತ್ತು ಮಕ್ಕಳಿಗೆ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ಸರಿಯಾದ ಸಮಯಕ್ಕೆ ಪೌಷ್ಟಿಕ ಆಹಾರ ನೀಡವುದರ ಮೂಲಕ ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಬೇಕು. ಅಲ್ಲದೆ ಅಪೌಷ್ಟಿಕತೆ ಹೊಂದಿರುವ ಮಕ್ಕಳ ಪಾಲಕರಿಗೆ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಓ ಭಂವ್ಹಾರಸಿಂಗ್ ಮೀನಾ, ಡಿಎಚ್‌ಓ ಡಾ. ಶರಣಪ್ಪ ಕ್ಯಾತನಾಳ್, ತಹಶೀಲ್ದಾರ್ ನಾಗಯ್ಯ ಹಿರೇಮಠ, ಸಿಡಿಪಿಓ ಆರತಿ ತುಪ್ಪದ್, ತಾಲೂಕು ಆರೋಗ್ಯ ಅಧಿಕಾರಿ ಡಾ. ರಜೀವುಲ್ಲಾ ಖಾದ್ರಿ, ಆಡಳಿತ ವೈದ್ಯಾಧಿಕಾರಿ ಡಾ. ಮುಬಾಶೀರ್, ವೈದ್ಯರಾದ ಶ್ರೀಧರ ಲಾಕೆ, ಡಾ. ಖಾಜೀಂ ಅಲಿ, ಡಾ.ಪ್ರೇರಣಾ, ಡಾ. ಮಾಧುರಿ, ಡಾ. ನಸರುನ್ನಿಸಾ, ಕ್ರೈಂ ಪಿಎಸ್ಐ ಚಂದ್ರಾಮಪ್ಪ ಬಳಿಚಕ್ರ ಸೇರಿದಂತೆ ಇತರರು ಇದ್ದರು.
ವಾಲೆಂಟಿಯರ್ : ಅನಂತ್ ದೇಶಪಾಂಡೆ
