ಕಲಬುರಗಿ | ಸಾಲದ ಹೊರೆ : ಭೀಮಾ ನದಿ ಹಿನ್ನೀರಿಗೆ ಹಾರಿ ರೈತ ಆತ್ಮಹತ್ಯೆ

Date:

Advertisements

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಬಸವಪಟ್ಪಣ ಗ್ರಾಮದಲ್ಲಿ ನಡೆದಿದೆ.

ಮರೆಪ್ಪ ಸಾಯಬಣ್ಣಾ ಬರ್ಮಾ (42) ಮೃತರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿ, ಪುತ್ರರಿದ್ದಾರೆ. ಫರಹತಾಬಾದ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತ ಮರೆಪ್ಪ ಅವರಿಗೆ ಎರಡು ಎಕರೆ ಜಮೀನು ಇತ್ತು. ಕೃಷಿಗಾಗಿ ಬ್ಯಾಂಕ್‌ ಆಫ್‌ ಬರೋಡಾ ಹಾಗೂ ಸ್ನೇಹಿತರ ಬಳಿ ಪಡೆದ ಕೈಸಾಲ ಸೇರಿ ಒಟ್ಟು 10 ಲಕ್ಷ ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿಯಿಂದ ಬೆಳೆ ಹಾನಿಯಾದ ಹಿನ್ನೆಲೆ ಸಾಲ ತೀರಿಸುವುದು ಹೇಗೆ ಎಂದು ಮನನೊಂದು ಭೀಮಾ ನದಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹಸಿ ಬರಗಾಲ ಘೋಷಣೆಗೆ ಆಗ್ರಹ :

ಕಲಬುರಗಿ ಜಿಲ್ಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲು ಏನೂ ಉಳಿದಿಲ್ಲ. ಸಂಪೂರ್ಣ ಬೆಳೆ ನಾಶವಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ತಕ್ಷಣವೇ ಪರಿಹಾರ ಹಣ ರೈತರ ಖಾತೆಗಳಿಗೆ ಜಮೆ ಮಾಡಬೇಕು. ಜಿಲ್ಲೆಯನ್ನು ಹಸಿ ಬರಗಾಲ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕಲ್ಯಾಣದಲ್ಲಿ ನೆರೆ | ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಹೆಚ್.ಡಿ.ದೇವೇಗೌಡ ಗಡುವು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರ ರಾಜಕಾರಣದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಸ್ಥಾನ

ಹಾಸನ ಲೋಕಸಭಾ ಕ್ಷೇತ್ರದ ಯುವ ಸಂಸದ ಶ್ರೇಯಸ್ ಎಂ. ಪಟೇಲ್ ಅವರು...

ಬೀದರ್‌ | ಬಸವಾದಿ ಶರಣರ ತ್ಯಾಗ,ಬಲಿದಾನ ಮರೆಯದಿರಿ : ಬಸವಲಿಂಗ ಪಟ್ಟದ್ದೇವರು

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು...

Download Eedina App Android / iOS

X