ಕಲಬುರಗಿ | ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹ: ಚೌಡಾಪುರ ಹೆದ್ದಾರಿಯಲ್ಲಿ ರೈತರ ಅನಿರ್ದಿಷ್ಟಾವಧಿ ಧರಣಿ

Date:

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ಬೆಳಗಾವಿ ಮತ್ತು ಬಾಗಲಕೋಟೆ ಮಾದರಿಯಲ್ಲಿ ಏಕದರ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಫಜಲಪುರ ತಾಲೂಕು ಘಟಕದ ವತಿಯಿಂದ ಚೌಡಾಪುರ ಹೆದ್ದಾರಿಯಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

- Advertisement -

ಕಳೆದ ನಾಲ್ಕು ದಿನಗಳಿಂದ ರೈತರು ಎತ್ತುಬಂಡಿ ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಹಗಲು-ರಾತ್ರಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಸರ್ಕಾರದ ಗಮನ ಸೆಳೆಯಲು ಹೋರಾಟ ತೀವ್ರಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಕಬ್ಬಿನ ಎಂಎಸ್‌ಪಿ ಹಾಗೂ ಎಫ್‌ಆರ್‌ಪಿ ದರವನ್ನು ₹5,500 ನಿಗದಿಪಡಿಸಬೇಕು. ಪ್ರತಿ ಟನ್ ಕಬ್ಬಿಗೆ ₹1,000 ಪ್ರೋತ್ಸಾಹಧನ ನೀಡಬೇಕು. ರೈತರಿಗಾಗಿ ಹೆಚ್ಚುವರಿಯಾಗಿ ₹400 ಕೋಟಿ ಅನುದಾನ ಮೀಸಲಿಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ನಡೆಯುವ ಮೋಸವನ್ನು ತಡೆಯಲು ಡಿಜಿಟಲ್ ತೂಕದ ವ್ಯವಸ್ಥೆ ಹಾಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರತಿ ಸಕ್ಕರೆ ಕಾರ್ಖಾನೆ ಮತ್ತು ಜಿಲ್ಲಾಧಿಕಾರಿ ಕಚೇರಿಗಳಲ್ಲಿಯೂ ಸಿಸಿ ಕ್ಯಾಮೆರಾ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

3530529

ಇದಲ್ಲದೆ, ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 15 ಟಿಎಂಸಿ ನೀರು ಬಿಡುಗಡೆ ಮಾಡಬೇಕು. ಭೀಮಾ ಏತ ನೀರಾವರಿ ಯೋಜನೆಯ ಎಲ್ಲಾ ಕಾಲುವೆಗಳ ಕೊನೆಯ ಹಂತದವರೆಗೂ ನೀರು ಹರಿಸಬೇಕು. ಡಾ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿ, ಎ2+50% ಸೂತ್ರದ ಆಧಾರದ ಮೇಲೆ ರೈತರಿಗೆ ಬೆಲೆ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ರೈತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಲಾಗುವುದು ಎಂದು ರೈತ ಸಂಘ ಎಚ್ಚರಿಕೆ ನೀಡಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಂತರರಾಷ್ಟ್ರೀಯ ಬೌದ್ಧ ಧಮ್ಮ ದೀಕ್ಷಾ ಯಾತ್ರೆಗೆ ತೆರೆ; ಸನ್ನತಿಯಲ್ಲಿ ಸಾವಿರಾರು ಜನರಿಂದ ಬೌದ್ಧ ದೀಕ್ಷೆ ಸ್ವೀಕಾರ!

ಧರಣಿಯಲ್ಲಿ ರೈತ ಮುಖಂಡರು, ಯುವಕರು ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕಬ್ಬು ಬೆಳೆಗಾರರ ಸಭೆ ವಿವಾದ: ರೂ.25 ಲಕ್ಷ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಶಾಸಕ ಟಿ ಪಾಟೀಲ

ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ಬೆಳೆಗಾರರ...

ವಿಜಯಪುರ | ಕನ್ನಡದ ಅಸ್ಮಿತೆ, ಸಂಸ್ಕೃತಿ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ: ಪ್ರೊ. ವಿಜಯಾ ಕೋರಿಶೆಟ್ಟಿ

ಕನ್ನಡ ಭಾಷೆ, ನಾಡು ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ...

ದೊಡ್ಡಬಳ್ಳಾಪುರ |ಧರ್ಮಸ್ಥಳದ ಶ್ರೀಮುಡಿ ಭವನದದಲ್ಲಿ ದಲಿತ ಮುಖಂಡ ಗುರುರಾಜಪ್ಪ ರವರ ಶವ ಪತ್ತೆ !

ದಲಿತರ ಮುಖಂಡ, ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷರಾದ ಸಿ.ಗುರುರಾಜಪ್ಪ...