ಕಲಬುರಗಿ | ಮನರೇಗಾ ಕಾರ್ಮಿಕರಿಗೆ ಕೆಲಸ ನೀಡುವಂತೆ ಒತ್ತಾಯ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಹಲವು ಗ್ರಾಮಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರೈತ ಕಾರ್ಮಿಕ ಹಾಗೂ ಮಹಿಳಾ ಸಂಘದ ಕಾರ್ಯಕರ್ತರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

“ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮ ಪಂಚಾಯಿತಿ, ಕಲ್ಲಹಂಗರಗಾ ಗ್ರಾಮ ಪಂಚಾಯಿತಿ, ನೆಲೋಗಿ ಗ್ರಾಮ ಪಂಚಾಯಿತಿ, ಹರನೂರ ಗ್ರಾಮ ಪಂಚಾಯಿತಿ, ಕೋಳಕೂರ ಗ್ರಾಮ ಪಂಚಾಯಿತಿ, ನೆದಲಗಿ ಗ್ರಾಮ ಪಂಚಾಯಿತಿ, ಇಜೇರಿ ಗ್ರಾಮ ಪಂಚಾಯಿತಿ, ಕಡಕೋಳ ಗ್ರಾಮ ಪಂಚಾಯಿತಿಗಳಲ್ಲಿ ಮನೆರೇಗಾ ಕಾರ್ಮಿಕರಿಗೆ ಸ್ಪಂದಿಸದೆ ತಾಲೂಕು ಪಂಚಾಯಿತಿ ಅಧಿಕಾರಿಗಳು ಸತಾಯಿಸುತ್ತಿದ್ದು, ಕೂಲಿ ಕೆಲಸ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ವಿವಿದ ಗ್ರಾಮಗಳಲ್ಲಿ ಕೂಲಿ ಕಾರ್ಮಿಕರ ಕೆಲಸ ನೀಡುತ್ತಿಲ್ಲ. ಅಭಿವೃದ್ಧಿ ಅಧಿಕಾರಿಗಳು ಸ್ಪಂದನೆ ಮಾಡುತ್ತಿಲ್ಲ. ವಿವಿಧ ಗ್ರಾಮಗಳಿಂದ ನೆರೇಗಾ ಕಾರ್ಮಿಕರು ಹೊರಾಟ ಮಾಡಿದರು. ಜಿಲ್ಲಾ ಪಂಚಾಯತ್ ಅಧಿಕಾರಿ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳು, ಕಂಪ್ಯೂಟರ್ ಆಪರೇಟರ್‌ಗಳು ಮನರೇಗಾ ಕಾರ್ಮಿಕರ ನೋವುಗಳಿಗೆ ಸ್ಪಂದಿಸದಿರುವುದು ದುರಾದುಷ್ಟಕರ ಸಂಗತಿ. ಹಾಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ‌ಮನವಿ ಸ್ವೀಕರಿಸಿ ಮನೇರಾಗ ಕಾರ್ಮಿಕರಿಗೆ ಕೆಲಸ ನೀಡಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮಣಿಪುರ ಘಟನೆ: ಅತ್ಯಾಚಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ; ದಸಂಸ ಆಗ್ರಹ

“ತಾಲೂಕು ಪಂಚಾಯತ್ ಇಒ ಅಬ್ದುಲ್‌ ನಬಿ ಮತ್ತು ಎಡಿ ಅವರನ್ನು ಹಾಗೂ ಸಂಬಂಧ ಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜೆಇ, ಕಂಪ್ಯೂಟರ್ ಆಪರೇಟರ್‌ಗಳನ್ನು ಕೂಡಲೇ ವಜಾಗೊಳಿಸಿ ಮನರೇಗಾ ಕಾರ್ಮಿಕರಿಗೆ ಕೆಲಸ ನೀಡಬೇಕು. ಇಲ್ಲವಾದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಒಗ್ಗೂಡಿ ಹಗಲು ರಾತ್ರಿ ಧರಣಿ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಜಗದೇವಿ ಎಂ ಒಟ್ಟಾಕರ, ಜೇವರ್ಗಿ ನಗರ ಘಟಕದ ಅಧ್ಯಕ್ಷ ಮಕ್ತುಮ ಪಟೇಲ, ತಾಲೂಕು ಅಧ್ಯಕ್ಷ ಶಿವರಾಜ ಎಸ್ ಕರ್ಕಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...