ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

Date:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಹಾಗೂ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಸಿಪಿಐ ಜಿಲ್ಲಾ ಘಟಕದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

- Advertisement -

ನಗರದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ ಮುಖಂಡರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಖಚಿತಪಡಿಸಲು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ ಹಾಗೂ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದೊಳಗೆ ಭಿನ್ನಾಭಿಪ್ರಾಯಗಳಿವೆ ಎಂಬ ಮಾಧ್ಯಮ ವರದಿಗಳು ಆಯೋಗದ ನಿರ್ಧಾರ ಪ್ರಕ್ರಿಯೆ ಮತ್ತು ಪಾರದರ್ಶಕತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಮುಖಂಡರು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಯಾವುದೇ ಅರ್ಹ ಮತದಾರರ ಹೆಸರು ತಪ್ಪಾಗಿ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಅದನ್ನು ರಕ್ಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು. ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಆಯ್ಕೆ ಸಮಿತಿಯ ಮೂಲಕ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸಿಪಿಐ ಒತ್ತಾಯಿಸಿತು.

ಇದನ್ನು ಓದಿದ್ದೀರಾ? ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶಕುಮಾರ ರಾಠೋಡ, ರಾಜ್ಯ ಮಂಡಳಿ ಸದಸ್ಯ ಮೌಲಾ ಮುಲ್ಲಾ, ಸಹ ಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಜಿಲ್ಲಾ ಖಜಾಂಚಿ ಭೀಮಾಶಂಕರ ಮಾಡಿಯಾಳ, ನಗರ ಕಾರ್ಯದರ್ಶಿ ಸಾಜೀದ್ ಅಹಮದ್, ಮಹಮ್ಮದ್ ಚೌದರಿ, ಮಲ್ಲಿಕಾರ್ಜುನ ಕೆಲ್ಲೂರ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...