ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

Date:

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುಲೇಪೇಟ ರೈತರ ಹಿತ ರಕ್ಷಣಾ ಬೇಡಿಕೆ ಸಮಿತಿ ವತಿಯಿಂದ ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು. ಬಳಿಕ ಕಲಬುರಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಒತ್ತಾಯಿಸಲಾಯಿತು.

- Advertisement -

ಚಿಂಚೋಳಿ ತಾಲೂಕಿನಲ್ಲಿ ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರು ಮಳೆ ಕೊರತೆ, ಬೆಳೆ ನಷ್ಟ ಹಾಗೂ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನು ಮಾರಾಟ ಮಾಡಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದು, ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕೂಡಲೇ ಕಬ್ಬು ಖರೀದಿ ಆರಂಭಿಸಿ ರೈತರ ಕಬ್ಬನ್ನು ಖರೀದಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಬೆಳಗಾವಿ ಮಾದರಿಯಲ್ಲಿ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು. ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ರಾಜ್ಯ ಸಲಹಾ ದರ (ಎಸ್‌ಎಪಿ) ಘೋಷಿಸಬೇಕು. ಕೇಂದ್ರ ಸರ್ಕಾರ ಕಬ್ಬಿನ ಕನಿಷ್ಠ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹಾಗೂ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಅಲ್ಲದೆ, ಅರ್ಹ ರೈತರಿಗೆ ಬರ ಪರಿಹಾರದ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬೆಳೆ ನಷ್ಟ ಅನುಭವಿಸಿದ ಪ್ರತಿಯೊಬ್ಬ ರೈತರಿಗೆ ₹25 ಸಾವಿರ ಪರಿಹಾರ ನೀಡಬೇಕು. ಬೆಳೆ ವಿಮೆ ಮಾಡಿಸಿರುವ ರೈತರಿಗೆ ವಿಮಾ ಕಂಪನಿಗಳಿಂದ ಬರಬೇಕಾದ ಪರಿಹಾರದ ಹಣವನ್ನು ವಿಳಂಬವಿಲ್ಲದೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...