ಕಲಬುರಗಿ | ಕಾಳಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

Date:

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು. ತಾಲೂಕಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ಮನರೇಗಾ) ಸಮರ್ಪಕವಾಗಿ ಜಾರಿಗೆ ತರಬೇಕು. ಮನರೇಗಾ ಕೂಲಿ ಕಾರ್ಮಿಕರಿಗೆ ದಿನಕ್ಕೆ 600 ರೂ. ಕೂಲಿ ಮತ್ತು ವರ್ಷಕ್ಕೆ 200 ಮಾನವ ದಿನಗಳ ಕೆಲಸ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲ್ಯೂಯು) ಒತ್ತಾಯಿಸಿದೆ.

ಕಾಳಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. “ಈ ವರ್ಷ ಮುಂಗಾರು ಮಳೆ ಬಾರದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಕೂಲಿಕಾರ್ಮಿಕರು ಕೆಲಸವಿಲ್ಲದೆ ಅಲೆಯುವಂತಾಗಿದೆ. ರೈತರು ಕೂಡ ಕೂಲಿಕಾರರಾಗಿದ್ದಾರೆ. ಪಟ್ಟಣಗಳಿಗೆ ಜನರು ವಲಸೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕಾಳಗಿ ತಾಲೂಕನ್ನು ಬರ ಪೀಡಿತ ಪ್ರವೇಶವೆಂದು ಘೋಷಿಸಿ, ಪರಿಹಾರ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

“ಬರಗಾಲದ ಕಾಮಗಾರಿಗಳನ್ನು ಆರಂಭಿಸಿ ಕೂಲಿಕಾರರಿಗೆ ನಿರಂತರ ಕೆಲಸ ನೀಡಬೇಕು, ಅದೇ ರೀತಿಯಾಗಿ ಮನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಬಿಟ್ಟು, ಕೂಲಿಕಾರರಿಗೆ ಕೆಲಸ ನೀಡುವತ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೋಡಿ, ಮಂಗಲಗಿ ಗ್ರಾಮದ ಕೂಲಿಕಾರರಿಗೆ ಬಾಕಿ ವೇತನ ಪಾವತಿಸಬೇಕು. ಹಲಚೇರಾ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು ಯೋಜನೆಯಡಿ ಹಾಗೂ ನೀರು ನಿರ್ವಹಣೆಗೆ ಮೀಸಲಿಟ್ಟು ಹಣವನ್ನು ಲೂಟಿ ಮಾಡಿದ ಪಿಡಿಒ ಮೈಬೂಬ್ ಪಟೇಲ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಗರಹುಕುಂ ಸಾಗುವಳಿದಾರರಿಗೆ ಪಟ್ಟಾ ನೀಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಶಿನಾಥ ಬಂಡಿ, ಮಲ್ಲಮ್ಮ ಮಗಿ, ಗುರುನಂದೇಶ ಕೋಣಿನ್, ಸಲೀಂ ಪಟೇಲ ನೈಕೋಡಿ, ಶ್ರೀಶೈಲ ಜಮಾದಾರ, ರಿಯಾಜ ಪಟೇಲ್ ಮಂಗಲಗಿ, ಹನೀಫಾ ಕೋಡದೂರ, ಕಸ್ತೂರಿಬಾಯಿ ಕೋಡದೂರ, ರೇವಯ್ಯಸ್ವಾಮಿ ಕಾಳಗಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ತವ್ಯ ಸಂಬಂಧಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತಿಲ್ಲ; ಪೊಲೀಸರಿಗೆ ಆಯುಕ್ತರ ಎಚ್ಚರಿಕೆ

ಪೊಲೀಸ್‌ ಸಿಬ್ಬಂದಿಗಳು ಸಮವಸ್ತ್ರದಲ್ಲಿರುವ ತಮ್ಮ ಫೋಟೋ, ವಿಡಿಯೋ, ರೀಲ್ಸ್‌ ಸೇರಿದಂತೆ ಕರ್ತವ್ಯಕ್ಕೆ...

ಮಡಿಕೇರಿ | ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು: ಧರ್ಮಜ ಉತ್ತಪ್ಪ

ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ...

ಕೊಡಗು | ನಿಧಿ ಆಸೆಗೆ ಮನೆಯ ಕೋಣೆಯಲ್ಲೇ ಗುಂಡಿ ಕೊರೆದ ದುರುಳರು ಪೊಲೀಸರ ಬಲೆಗೆ

ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ...

ಮಂಡ್ಯ | ಕಡತನಾಳು ಶಾಲೆಯಲ್ಲಿ ಡೆಂಘೀ ವಿರೋಧಿ ಮಾಸಾಚರಣೆ

ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಬಲ್ಲೇನಹಳ್ಳಿ, ತಾಲೂಕು ಆರೋಗ್ಯ ಕೇಂದ್ರ ಹಾಗೂ...