ಕಲಬುರಗಿ | ಮ್ಯುಟೇಷನ್‌ಗೆ ₹18 ಸಾವಿರ ಲಂಚ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

Date:

ಜಮೀನಿನ ಮ್ಯುಟೇಷನ್ ಮಾಡಿಕೊಡಲು 18 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಅದರಲ್ಲಿ 12 ಸಾವಿರ ರೂ. ಹಣವನ್ನು ಫೋನ್‌ಪೇ ಮೂಲಕ ಸ್ವೀಕರಿಸಿದ ಆರೋಪದ ಮೇರೆಗೆ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೈಬೂಬ್ ಪಟೇಲ್ ಅವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

- Advertisement -

ಜೇವರ್ಗಿ ತಾಲೂಕಿನ ಮಲ್ಲಾ (ಬಿ) ಗ್ರಾಮದ ಸರ್ಕಾರಿ ಖುಲ್ಲಾ ಜಾಗದಲ್ಲಿರುವ 60×40 ಅಡಿ ನಿವೇಶನವನ್ನು ಮರೆಪ್ಪ ತಳವಾರ ಅವರ ಹೆಸರಿಗೆ ಮ್ಯುಟೇಷನ್ ಮಾಡಿಕೊಡಲು ಪಿಡಿಒ ಮೈಬೂಬ್ ಪಟೇಲ್ ಅವರು ದೂರುದಾರ ಶಿವರೆಡ್ಡಿ ಅವರ ಬಳಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಧಿಕಾರಿಯ ಬೇಡಿಕೆಯಂತೆ ದೂರುದಾರರು 12 ಸಾವಿರ ರೂ. ಲಂಚದ ಹಣವನ್ನು ಫೋನ್‌ಪೇ ಮೂಲಕ ಪಿಡಿಒಗೆ ಪಾವತಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಣವನ್ನು ಸ್ವೀಕರಿಸಿದ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪಿಡಿಒ ಮೈಬೂಬ್ ಪಟೇಲ್ ಅವರನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಮುರುಗುಂಡಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಪತ್ನಿಯ ಕೊಲೆ ಪ್ರಕರಣದಲ್ಲಿ ಪತಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...