ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಬುಧವಾರ ಕಲಬುರಗಿಯ ಗುಲ್ಬರ್ಗಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಜಿಮ್ಸ್) ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳು ಹಾಗೂ ಅವರ ಸಂಬಂಧಿಕರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ, ಔಷಧಿ, ವೈದ್ಯಕೀಯ ಸೇವೆ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ರೋಗಿಗಳ ಆರೋಗ್ಯದ ಬಗ್ಗೆಯೂ ವಿಚಾರಿಸಿ, ಚಿಕಿತ್ಸೆಯಿಂದ ಯಾವುದೇ ತೊಂದರೆ ಎದುರಾಗುತ್ತಿದೆಯೇ ಎಂಬುದನ್ನು ತಿಳಿದುಕೊಂಡರು.
ಬಳಿಕ ಜಿಮ್ಸ್ ನಿರ್ದೇಶಕ ಡಾ. ಉಮೇಶ ಎಸ್.ಆರ್. ಅವರೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ, ಆಸ್ಪತ್ರೆಗೆ ಅಗತ್ಯವಿರುವ ಮೂಲಸೌಕರ್ಯ, ವೈದ್ಯಕೀಯ ಸೌಲಭ್ಯಗಳು ಹಾಗೂ ಇತರ ಅಗತ್ಯತೆಗಳ ಕುರಿತು ಚರ್ಚಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಅಕ್ರಮ ಆರೋಪ: ಅಭ್ಯರ್ಥಿ ಮನೆ ಮೇಲೆ ಸಿಐಡಿ ದಾಳಿ
ಆಸ್ಪತ್ರೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿದರು.





