ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

Date:

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ ಒಪ್ಪಿಗೆ ಸಿಗದಿದ್ದರೆ ಟವರ್‌ನಿಂದ ಕೆಳಗೆ ಬೀಳುವುದಾಗಿ ಬೆದರಿಸಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ಆಳಂದ ತಾಲ್ಲೂಕಿನ ನಿಂಬರ್ಗಾ ಸಮೀಪದ ಮಾಡಿಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ.

- Advertisement -

ಶಾಹಬಾದ್ ತಾಲೂಕಿನ ತೊನ್ನಸಳ್ಳಿ ಗ್ರಾಮದ ಮಹೇಶ ತಂದೆ ಮಲ್ಲಪ್ಪ ಭಜಂತ್ರಿ ಟವರ್ ಏರಿದ ಯುವಕ. ತನ್ನ ತಾಯಿಯ ತವರೂರಾದ ಮಾಡಿಯಾಳ ಗ್ರಾಮಕ್ಕೆ ಶುಕ್ರವಾರ ಬಂದಿದ್ದ ಮಹೇಶ, ತನ್ನ ಪ್ರೀತಿಯ ವಿಚಾರವನ್ನು ತಾಯಿಯ ಸಹೋದರರಾದ ರಾಮು ಭಜಂತ್ರಿ ಹಾಗೂ ಭೀಮಾಶಂಕರ ಭಜಂತ್ರಿ ಅವರ ಬಳಿ ತಿಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ವೇಳೆ ಕುಟುಂಬದವರು ಮುಂದೆ ನೋಡೋಣ ಎಂದು ಸಮಾಧಾನಪಡಿಸಿ, ಆತುರದ ನಿರ್ಧಾರ ಕೈಗೊಳ್ಳದಂತೆ ಮನವೊಲಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ ಇದರಿಂದ ನಿರಾಶೆಗೊಂಡ ಮಹೇಶ, ಶನಿವಾರ ಯಾರ ಗಮನಕ್ಕೂ ಬಾರದಂತೆ ಗ್ರಾಮದ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ.
ಟವರ್ ಏರಿದ ಬಳಿಕ ತನ್ನ ಸಹೋದರ ಮಾವಂದಿರಿಗೆ ಕರೆ ಮಾಡಿದ ಮಹೇಶ, “ನಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು. ಇಲ್ಲವಾದರೆ ಟವರ್‌ನಿಂದ ಕೆಳಗೆ ಬೀಳುತ್ತೇನೆ” ಎಂದು ತಿಳಿಸಿದ್ದಾನೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಹೇಶನನ್ನು ಕೆಳಗಿಳಿಸಲು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ನಿರಂತರವಾಗಿ ಮನವೊಲಿಸುವ ಪ್ರಯತ್ನ ನಡೆಸಿದರು. ಎರಡು ಗಂಟೆಗೂ ಹೆಚ್ಚು ಕಾಲ ನಡೆದ ಮನವೊಲಿಕೆಗೂ ಆರಂಭದಲ್ಲಿ ಯುವಕ ಸ್ಪಂದಿಸಲಿಲ್ಲ.

Advertisements
Advertisements

ನಂತರ ಗ್ರಾಮಸ್ಥರು, ಮಹೇಶ ಕೆಳಗೆ ಸುರಕ್ಷಿತವಾಗಿ ಇಳಿದು ಬಂದರೆ ಆತನ ಪ್ರೀತಿಯ ವಿಚಾರವನ್ನು ಕುಟುಂಬದವರೊಂದಿಗೆ ಚರ್ಚಿಸಿ ಮದುವೆ ವಿಷಯದಲ್ಲಿ ಮುಂದಿನ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಆದರೂ ಆತ ಕೆಳಗಿಳಿಯಲು ಸಿದ್ಧನಾಗಲಿಲ್ಲ.

ಕೊನೆಗೆ ಸಹೋದರ ಮಾವರು ದೇವರ ಹೆಸರಿನಲ್ಲಿ ಆಣೆ ಮಾಡಿ, ಆತ ಪ್ರೀತಿಸಿದ ಯುವತಿಯೊಂದಿಗೇ ಮದುವೆ ಮಾಡಿಸುವ ನಿಟ್ಟಿನಲ್ಲಿ ಕುಟುಂಬದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಮಹೇಶ ಟವರ್‌ನಿಂದ ಕೆಳಗೆ ಇಳಿದು ಬಂದಿದ್ದಾನೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಯುವಕ ಸುರಕ್ಷಿತವಾಗಿ ಕೆಳಗಿಳಿದ ಬಳಿಕ ಸಂಬಂಧಿಕರು ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಿಂದ ಕೆಲಕಾಲ ಗ್ರಾಮದಲ್ಲಿ ಕುತೂಹಲ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...

ಬಾಗೇಪಲ್ಲಿ | ಸಂಘದ ಅಧ್ಯಕ್ಷರ ಹಾಗೂ ಅಡಳಿತ ಮಂಡಳಿ ವಿರುದ್ದ ಕಾನೂನು ಕ್ರಮ ಜರುಗಿಸಿ:ಜಿಲ್ಲಾ ನಿರ್ದೇಶಕ ಎನ್.ಸುಕುಮಾರ್

ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರೇ ಉಚ್ಚ ನ್ಯಾಯಾಲಯ ಹಾಗೂ...