ಕಲಬುರಗಿ | ದೇವದಾಸಿಯರ ಬೇಡಿಕೆ ಈಡೇರಿಕೆಗೆ ಆಗ್ರಹ

Date:

ದೇವದಾಸಿಯರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಭಾರತ ಮುಕ್ತಿ ಮೋರ್ಚಾ ರಾಜ್ಯ ಘಟಕ, ಯ್ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ ಮತ್ತು ದೇವದಾಸಿ ಪದ್ಧತಿ ನಿರ್ಮೂಲನೆ ವೇದಿಕೆ ಹಾಗೂ ಮಗಳಮುಖಿಯರ ಸ್ವಾಭಿಮಾನ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಸ್ ಡಿಪೋ ಕ್ರಾಸ್‌ವರೆಗೆ ಬಂದು ಚಿಂಚೋಳಿ ತಹಶೀಲ್ದಾರ್ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿರುವ ದೇವದಾಸಿಯರನ್ನು ಸರ್ವೆ ಮಾಡಿ ಅವರಿಗೆ ದೇವದಾಸಿ ಪ್ರಮಾಣ ಪತ್ರ ನೀಡಿ, ಸರ್ಕಾರದಿಂದ ಸೌಲಭ್ಯ ಪಡೆಯಲು ಅನುಕೂಲ ಮಾಡಿಕೊಡಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರಮಾಣ ಪತ್ರ ನೀಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಸಾಮಾನ್ಯ ಸಭೆಗಳು, ವರ್ಷದಲ್ಲಿ ಕನಿಷ್ಟ ಒಂದೆರಡು ಬಾರಿಯಾದರೂ ಅಂಬೇಡ್ಕರ ಭವನ ಮತ್ತು ಡಾ ಬಾಬು ಜಗಜೀವನರಾಂ ಭವನಗಳಲ್ಲಿ ಸಾಮಾನ್ಯ ಸಭೆ ನಡೆಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ನಡೆಯುತ್ತಿರುವ ಜೂಜಾಟ, ಮಟಕಾ ಆಟದ ಚಟಕ್ಕೆ ಒಳಗಾದವರ ಮನೆಯಲ್ಲಿ ಮಕ್ಕಳ ಶೈಕ್ಷಣಿಕ ಸಮಸ್ಯೆ ಮತ್ತು ಕುಟುಂಬದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಆದ್ದರಿಂದ ಕೂಡಲೇ ಜೂಜಾಟ ಅಡ್ಡದ ಮೇಲೆ ಮಟಕಾ ಚೀಟಿ ಬರೆದುಕೊಳ್ಳುವವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

“ಚಿಂಚೋಳಿ ತಾಲೂಕಿನ ಸುಲೇಪೇಟ ಸಪ್ತಗಿರಿ ಮದ್ಯದ ಅಂಗಡಿಯಿಂದ ಮತ್ತು ಜೈ ಭವಾನಿ ಮದ್ಯದ ಅಂಗಡಿಗಳಿಂದ ಹೂವಿನಬಾವ, ಯಲಕಪಳ್ಳಿ, ರುಸ್ತಂಪೂರ, ಕುಪನೂರ, ಬೀರನಳ್ಳಿ, ರಾಮತೀರ್ಥ, ಯಾಕಪೂರ, ಗರಗಪಳ್ಳಿ, ಮೋತಕಪಳ್ಳಿ, ಬೇಡಕಪಳ್ಳಿ, ಪೆಂಚನಪಳ್ಳಿ ಗ್ರಾಮಗಳಿಗೆ ಹಾಡುಹಗಲೇ ದ್ವಿಚಕ್ರ ವಾಹನ, ಆಟೋಗಳಲ್ಲಿ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದಾರೆ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಮದ್ಯದ ಅಂಗಡಿಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಪ್ರಾಪ್ತ ಬಾಲಕಿಯ ಕತ್ತು ಕೊಯ್ದು ಪರಾರಿಯಾದ ಬಾಲಕರು

“ಚಿಂಚೋಳಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಮೌನೇಶ್ವರ ಗುಡಿಯ ಹತ್ತಿರ ಸುಮಾರು ಹತ್ತು ವರ್ಷಗಳಿಂದ ಜೋಪಡಿಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಕುಟುಂಬಗಳಿಗೆ ಮನೆ ಮಂಜೂರು ಮಾಡಬೇಕು. ಆಂಧ್ರ ಮತ್ತು ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವ ವೆಂಕಟಾಪೂರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಮಾರುತಿ ಗಂಜಗಿರಿ, ಗೋಪಾಲ್ ಗಾರಂಪಳ್ಳಿ, ರಾಜುಕುಮಾರ್, ಸುಭಾಷ್ ತಡಪಳ್ಳಿ, ಶರಣ ನಾಟಿಕರ್, ವಿಜಯ ತಡಪಳ್ಳಿ, ಮೊನೇಶ್ ಗಾರಂಪಳ್ಳಿ, ಮಲ್ಲಿಕಾರ್ಜುನ ಗಾರಂಪಳ್ಳಿ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂ.ಉಷಾ ಅವರ‌ ‘ಬಾಳ‌ ಬಟ್ಟೆ’ ಕಾದಂಬರಿಗೆ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ...

ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು...

ಬೆಂಗಳೂರು | ‘ಜಾಹೀರಾತು ಮುಕ್ತ ಅಭಿಯಾನ’ಕ್ಕೆ ಕೈ ಜೋಡಿಸಲು ನಾಗರಿಕರಲ್ಲಿ ಮನವಿ ಮಾಡಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ...

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು...