ಕಲಬುರಗಿ | ದೇವನಹಳ್ಳಿ ಭೂವಿವಾದ : ರೈತರ ನ್ಯಾಯಯುತ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ

Date:

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ರೈತರ ಫಲವತ್ತಾದ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಆದರೆ ರೈತರು ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ನ್ಯಾಯ ದೊರಕಿಸಿ ಕೊಡಬೇಕು ಎಂದು ಎದ್ದೇಳು ಕರ್ನಾಟಕ ಕಲಬುರಗಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.

- Advertisement -

ದೇವನಹಳ್ಳಿಯ ಭೂ ವಿವಾದ ಇದೀಗ ರಾಜ್ಯ ರಾಜಕೀಯದ ದಿಕ್ಕು ತಿರುಗಿಸುತ್ತಿರುವ ಇತ್ತೀಚಿನ ಬೆಳವಣಿಗೆಯಾಗಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳಲಿರುವ ತೀರ್ಮಾನಕ್ಕೆ ಇಡೀ ರಾಜ್ಯದ ಕಣ್ಣುಗಳು ನೆಟ್ಟಿವೆ. ಚನ್ನರಾಯಪಟ್ಟಣ ಸೇರಿದಂತೆ 13 ಗ್ರಾಮಗಳ ಭೂಮಿಯನ್ನು ಕೈಕೊಳ್ಳುವ ನಿರ್ಧಾರ ವಿರುದ್ಧ ರೈತರು ಹಾಗೂ ನಾಗರಿಕ ಚಳವಳಿಗಳು ಒಟ್ಟಾಗಿ ಬಿರುಸಾದ ವಿರೋಧ ವ್ಯಕ್ತಪಡಿಸುತ್ತಿವೆ. ಇದಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಜಿಲ್ಲಾ ಸಂಚಾಲಕರು ರಾಜೇಂದ್ರ ರಾಜವಾಳ, ಅಬ್ದುಲ್ ಖಾದರ್, ಲಕ್ಷ್ಮಣ್ ಮಂಡಲಗೇರಾ ಅವರು ಜಂಟಿ ಪ್ರಕಟಣೆ ಮೂಲಕ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾಂಗ್ರೆಸ್ ಸರ್ಕಾರ ರೈತರ ಪರ ನಿಂತು ಭೂಹಕ್ಕು ರಕ್ಷಿಸಬೇಕಿದೆ. ಇಲ್ಲದಿದ್ದರೆ ನಂಬಿಕೆ ಪತನವಾಗುವುದು ಅನಿವಾರ್ಯ. ಇದೇ ಭೂ ಯೋಜನೆಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ನೋಟೀಸ್ ಮತ್ತು ಇದೀಗ ಕಾಂಗ್ರೆಸ್ ಸರ್ಕಾರ ಅದೇ ಮಾರ್ಗವನ್ನು ಅನುಸರಿಸುತ್ತಿರುವುದು ಜನರಲ್ಲಿ ಗೊಂದಲ ಮತ್ತು ಆಕ್ರೋಶ ಉಂಟುಮಾಡಿದೆ. ಅಧಿಕಾರದಿಂದ ದೂರವಿದ್ದಾಗ ರೈತರ ಪರ ನಿಂತಿದ್ದ ಪಕ್ಷ ಈಗ ಕಂಪನಿಗಳ ಪರವಾಗಿ ನಿಂತಿರುವುದು ಖಂಡನೀಯ ಎಂದರು.

‘ರೈತಪಕ್ಷೀಯ ತೀರ್ಮಾನ ಮಾಡಿ ಜನನಂಬಿಕೆ ಉಳಿಸಬೇಕು. ಲಾಭದಾಳುಗಳ ಒತ್ತಡಕ್ಕೆ ಮಣಿದು ನೈತಿಕ ಪತನವನ್ನೇ ಆಹ್ವಾನಿಸುವುದು ಸರ್ಕಾರದ ಮುಂದೆ ಇರುವ ಎರಡು ನಿರ್ಧಾರಗಳು. ಈ ತೀರ್ಮಾನವು ಕೇವಲ ದೇವನಹಳ್ಳಿ ಮಟ್ಟಿಗೆ ಸೀಮಿತವಲ್ಲ; ಇಡೀ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧದ ಭಾರಿ ಪ್ರತಿಕ್ರಿಯೆಗೆ ಕಾರಣವಾಗುವ ಸಾಧ್ಯತೆ ಇದೆ’ ಎಂದು ಹೇಳಿದರು.

‘ಸಿದ್ದರಾಮಯ್ಯನವರು ರೈತಪಕ್ಷೀಯ ತೀರ್ಮಾನ ಕೈಗೊಂಡರೆ, ಅದು ಕೇವಲ ಹೋರಾಟಗಾರರಿಗೆ ಸಿಹಿ ಸುದ್ದಿ ಮಾತ್ರವಲ್ಲ;
ಜನತೆಯ ವಿಶ್ವಾಸಕ್ಕೆ ತಕ್ಕ ಪ್ರತಿ ಉತ್ತರವೂ ಆಗುತ್ತದೆ. ಇಲ್ಲದಿದ್ದರೆ ಈ ನಿರ್ಧಾರವು ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೂ ದೊಡ್ಡ
ಧಕ್ಕೆಯಾಗಿ ಪರಿಣಮಿಸಲಿದೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...