ಕಲಬುರಗಿ | ಒಂದು ದೇಶ-ಒಂದು ಚುನಾವಣೆ ವಿಷಯ ಚರ್ಚಿಸದೆ ಜಾರಿ: ಕೇಂದ್ರದ ನಡೆ ಖಂಡಿಸಿ ಧರಣಿ

Date:

Advertisements

ಒಂದು ದೇಶ ಒಂದು ಚುನಾವಣೆ ವಿಷಯ ಚರ್ಚಿಸದೇ ಏಕಾಏಕಿ ಜಾರಿ ಮಾಡಲು ಹೊರಟಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡೆ ಖಂಡನಾರ್ಹ. ಕೇಂದ್ರ ಸರಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕೆಂದುಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕಲಬುರಗಿ ಜಿಲ್ಲಾ ಶಾಖೆಯ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕಲಬುರಗಿ ನಗರದ ಗಾಂಧಿ ಪ್ರತಿಮೆ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು.

ಧರಣಿ ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ್, “ಒಂದು ದೇಶ ಒಂದು ಚುನಾವಣೆಯ ಇದೊಂದು ಕೇಂದ್ರ ಸರ್ಕಾರದ ಅಜೆಂಡಾದ ಭಾಗ. ಕ್ರೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಇದನ್ನು ಅನುಷ್ಠಾನ ಮಾಡುವುದಕ್ಕೆ ಸಾಧ್ಯವೇ ಇಲ್ಲ” ಎಂದರು.

Advertisements

ಆಡಳಿತಾರೂಡ ಬಿಜೆಪಿಯು ಗುಪ್ತ ಅಜೆಂಡಾವನ್ನು ಒಳಗೊಂಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪವನ್ನು ಸಂಸತ್ ಒಳಗೆ ಮತ್ತು ಹೊರಗೆ ದೇಶದ ಜನಾಭಿಪ್ರಾಯ ರೂಪಿಸಬೇಕಿದೆ. ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದರು.

“ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತರೂಡ ಪಕ್ಷ ವಿಶ್ವಾಸ ಮತ ಗಳಿಸಲು ಸೋತರೆ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾಪದಲ್ಲಿ ಪರಿಹಾರವಿಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಮತವಿರುವವ ಪಕ್ಷ ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆಯ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ ಸಾಮರ್ಥ್ಯ ನಮ್ಮ ಈಗ ಇರುವ ಚುನಾವಣಾ ಆಯೋಗಕ್ಕೆ ಇಲ್ಲ. ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ. ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗುತ್ತದೆ. ಇದರ ಜೊತೆಗೆ ಸಂವಿಧಾನದ ಕೈ ತಿದ್ದುಪಡಿ ತರಬೇಕಾಗುತ್ತದೆ. ಇವೆಲ್ಲವೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ, ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟು ಹಾಕಿ. ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಈ ಕೆಲಸವನ್ನು ಮಾಡಲಾಗಿದೆ” ಎಂದು ಡಾ. ಡಿ.ಜಿ. ಸಾಗರ್ ದೂರಿದರು.

ಇದನ್ನು ಓದಿದ್ದೀರಾ? ರಾಯಚೂರು | ಸರ್ಕಾರಿ ಭೂಮಿ ಕಬಳಿಸಿ, ಬಿಜೆಪಿ ಮುಖಂಡನಿಂದ ಅಕ್ರಮ ಮಾರಾಟ: ಮಹಾವೀರ್ ಆರೋಪ

ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಜೀವ ಬೆದರಿಕೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಜೊತೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಬಿ.ಸಿ. ವಾಲಿ, ದಲಿತ ಕಲಾಮಂಡಳಿ ಮುಖಂಡರಾದ ಅಂಬಣ್ಣ ಜಂಬಗಿ ಮಹಾದೇವ, ಶಂಕರ್, ಜಿಲ್ಲಾ ಮುಖಂಡರಾದ ಸುರೇಶ್ ಹಾದಿಮನಿ, ಹೆಚ್. ಶಂಕರ್, ಕೃಷ್ಣಪ್ಪ ಕರಣಿಕ್, ತಾಲೂಕು, ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X