ಕಲಬುರಗಿ | ಧರ್ಮಸ್ಥಳ ದೌರ್ಜನ್ಯ ಪ್ರಕರಣ : ಎಸ್‌ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ : ಲಕ್ಷ್ಮಣ್ ಮಂಡಲಗೇರಾ

Date:

ಧರ್ಮಸ್ಥಳದಲ್ಲಿ ನಡೆದಿದ್ದ 16 ವರ್ಷದ ಸೌಜನ್ಯಾಳ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಮರ್ಪಕ ತನಿಖೆಗೆ ಒಳಪಡಿಸಬೇಕು ಎಂಬುದು ಇತ್ತೀಚೆಗೆ ದೇವಸ್ಥಾನದ ಮಾಜಿ ಸ್ವಚ್ಛತಾ ಕಾರ್ಮಿಕರೊಬ್ಬರು ಭಯಾನಕ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಕೆಲವು ದಶಕಗಳಿಂದ ಧರ್ಮಸ್ಥಳದ ಸುತ್ತಮುತ್ತ ನೂರಾರು ಕೊಲೆಗಳು ಮತ್ತು ಹಲವು ಬಲಿಪಶುಗಳ ಹೆಣಗಳನ್ನು ಇವರೇ ಹೂತಾಕಿರುವ ಬಗ್ಗೆ ಮಾಹಿತಿ ನೀಡಲು ಸಿದ್ಧ ಎಂದಿದ್ದಾರೆ. ಇವೆಲ್ಲ ಘಟನೆಗಳನ್ನು ಇಟ್ಟುಕೊಂಡು ಎಸ್ಐಟಿ ತಂಡ ನಿಷ್ಪಕ್ಷಪಾತ ತನಿಖೆ ನಡೆಸಿ, ಅಪರಾಧಿಗಗಳಿಗೆ ಕಾನೂನಿನ ಶಿಕ್ಷೆ ನೀಡಬೇಕೆಂದು ಕರ್ನಾಟಕ ಜನಶಕ್ತಿಯ ರಾಜ್ಯ ಸಮಿತಿ ಒತ್ತಾ

- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಈ ಎಲ್ಲದರ ತನಿಖೆಗಾಗಿ ಎಸ್.ಐ.ಟಿ ರಚಿಸುವಂತೆ ಕೋರಿತ್ತು. ಮಾಜಿ ಉದ್ಯೋಗಿಯ ದೂರು ಮತ್ತು ಮಹಿಳಾ ಆಯೋಗದ ಪತ್ರವನ್ನು ಆಧಾರವಾಗಿಟ್ಟುಕೊಂಡು ಸರ್ಕಾರ ಈಗ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸುವ ಮೂಲಕ ಪ್ರಕರಣದ ಗಂಭೀರತೆಯನ್ನು ಲೆಕ್ಕಹಾಕಿದೆʼ ಎಂದು ಕರ್ನಾಟಕ ಜನಶಕ್ತಿಯ ರಾಜ್ಯ ಸಮಿತಿಯ ಸದಸ್ಯ ಲಕ್ಷ್ಮಣ ಮಂಡಲಗೇರಾ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

2012ರಲ್ಲಿ ಧರ್ಮಸ್ಥಳದಲ್ಲಿ 16 ವರ್ಷದ ಬಾಲಕಿ ಸೌಜನ್ಯಳ ಬರ್ಬರವಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತು. ಈ ದುರಂತವು ಕೇವಲ ಒಬ್ಬ ಬಾಲಕಿಯ ಕುಟುಂಬಕ್ಕೆ ಸೀಮಿತವಾಗಿರಲಿಲ್ಲ; ಇದು ಧರ್ಮಸ್ಥಳದಂತಹ ಧಾರ್ಮಿಕ ಕ್ಷೇತ್ರದಲ್ಲಿ ಭದ್ರತೆ ಮತ್ತು ನಂಬಿಕೆಯ ಪ್ರಶ್ನೆಯನ್ನು ಹುಟ್ಟುಹಾಕಿತು. ಆದರೆ, ಎಷ್ಟೆಲ್ಲ ಹೋರಾಟ, ಬಡಿದಾಟಗಳ ಹೊರತಾಗಿಯೂ ಈ ಪ್ರಕರಣದ ತನಿಖೆಯು ಸಮರ್ಪಕವಾಗಿ ನಡೆಯದಿರುವುದು, ಸತ್ಯವನ್ನು ಮುಚ್ಚಿಹಾಕುವ ಯತ್ನಗಳು, ಮತ್ತು ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗದಿರುವುದು ನಾಡಿನ ಎಚ್ಚೆತ್ತ ನಾಗರೀಕರಿಗೆ ಅಪಾರವಾದ ಆತಂಕ ಮತ್ತು ಅಸಮಾಧಾನವನ್ನು ಉಂಟುಮಾಡಿತ್ತುʼ ಎಂದು ಹೇಳಿದರು.

ಕರ್ನಾಟಕ ಸರ್ಕಾರವು ವಿಶೇಷ ತನಿಖಾ ದಳ ರಚಿಸಿರುವುದನ್ನು ನಾವು ಸ್ವಾಗತಿಸುತ್ತೇವೆ. ಇದೇ ಸಂದರ್ಭದಲ್ಲಿ ಈ ತನಿಖಾ ದಳದಿಂದ ಈ ಕೆಳಗಿನ ಸಂಗತಿಗಳು ಸಮರ್ಪಕವಾಗಿ ನಿರ್ವಹಿಸಲ್ಪಡುತ್ತವೆ ಎಂಬ ಬಗ್ಗೆ ಭರವಸೆ ಇಟ್ಟುಕೊಂಡಿದ್ದೇವೆ. ಅದರ ಮೇರೆಗೆ ಇದೀಗ ರಚನೆಯಾದ ವಿಶೇಷ ತನಿಖಾ ದಳದಿಂದ ನ್ಯಾಯದ ನಿರೀಕ್ಷೆ ಹೆಚ್ಚಾಗಿದೆʼ ಎಂದರು.

ʼಸೌಜನ್ಯ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಸ್ಪಷ್ಟವಾಗಿ ತೀರ್ಪಿನಲ್ಲಿ ಸೂಚಿಸಿದಂತೆ, ಇಡೀ ಪ್ರಕರಣವನ್ನು ದಿಕ್ಕುತಪ್ಪಿಸಿ ಲೋಪವೆಸಗಿದ ತನಿಖೆಯ ಉಸ್ತುವಾರಿ ಹೊತ್ತಿದ್ದ ಪೊಲೀಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಸೌಜನ್ಯ ಪ್ರಕರಣವನ್ನೂ ಸಮಗ್ರ ಮರುತನಿಖೆಗೆ ಒಳಪಡಿಸಬೇಕು. ಧರ್ಮಸ್ಥಳದ ದೇವಾಲಯವನ್ನು ಖಾಸಗಿ ಒಡೆತನದಿಂದ ಬಿಡಿಸಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತರುವ ಮೂಲಕ, ಬಲಾಢ್ಯರು ತಮ್ಮಿಷ್ಟ ಬಂದಂತೆ ಅಮಾಯಕರ ಮೇಲೆ ಅತ್ಯಾಚಾರ, ಅನಾಚಾರ ನಡೆಸುವ ಸಾಧ್ಯತೆಗಳನ್ನು ಇಲ್ಲವಾಗಿಸಬೇಕುʼ ಎಂದು ಒತ್ತಾಯಿಸಿದರು.

ʼಮಹಿಳೆಯರ ಮೇಲಿನ ಯಾವುದೇ ಬಗೆಯ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಈ ವಿಚಾರದಲ್ಲಿ ಕಾಣುತ್ತಿರುವ ನಿರ್ಲಿಪ್ತತೆ ಸರಿಯಾದುದದಲ್ಲ. ಮಹಿಳೆಯರನ್ನು ಕೇವಲ ತಮ್ಮ ಯೋಜನೆಗಳ ಫಲಾನುಭವಿಗಳಂತೆ ಅಥವಾ ಮತದ ಬ್ಯಾಂಕುಗಳಂತೆ ನೋಡುವ ದೃಷ್ಟಿಕೋನ ಬದಲಿಸಿಕೊಂಡು, ಮಹಿಳೆಯರ ಸುರಕ್ಷತೆ, ಘನತೆ ಮತ್ತು ಹಕ್ಕುಗಳ ರಕ್ಷಣೆಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಕ್ಕಾಗಿ ದನಿಯೆತ್ತೋಣ! ನಾವೆಲ್ಲರೂ ಒಗ್ಗಟ್ಟಾಗಿ ಈ ಆರೋಪಗಳ ಸತ್ಯಾಸತ್ಯತೆ ನ್ಯಾಯಬದ್ಧವಾಗಿ ಹೊರಬರಬೇಕೆಂದು ಒತ್ತಾಯಿಸುತ್ತಾ ದೇವರು ಮತ್ತು ಧರ್ಮದ ಹೆಸರ ಲ್ಲಿ ಜನರನ್ನು ದೌರ್ಜನ್ಯಕ್ಕೆ ಗುರಿಪಡಿಸುವ ಅಥವಾ ಮಂಕುಬೂದಿಯೆರಚುವ ಪ್ರವೃತ್ತಿ ನಿಲ್ಲಬೇಕುʼ ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ರಾಜೇಂದ್ರ ರಾಜವಾಳ ಮತ್ತಿತರರು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...