ಕಲಬುರಗಿ | “ಧೀಮಂತ ಧುರೀಣ” ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ

Date:

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಬಿಂಬಿಸುವ ‘ಧೀಮಂತ ಧುರೀಣ’ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು ಶನಿವಾರ ನಗರದ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಹಿರಿಯ ಸಾಹಿತಿ ಪ್ರೊ. ಆರ್‌.ಕೆ. ಹುಡಗಿ, “ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ಜನರು ನಾಗರಿಕರಾಗಿ ಬದುಕಲು ಅವಕಾಶ ಕಲ್ಪಿಸಿದ ಧೀಮಂತ ನಾಯಕರು. ಬಹುಸಂಖ್ಯಾತ ಜನರಿಗೆ ಅವರು ಆದರ್ಶವಾಗಿದ್ದು, ಜಾತಿ ಹಾಗೂ ವರ್ಣ ವ್ಯವಸ್ಥೆಯ ವಿರುದ್ಧ ನಿರಂತರವಾಗಿ ಧ್ವನಿ ಎತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಗ್ರಂಥವನ್ನು ಬಿಡುಗಡೆಗೊಳಿಸಿದ್ದು, ಅಭಿನಂದನಾ ಗ್ರಂಥದ ಕುರಿತು ಮಾತನಾಡಿದ ಚೇತನ್ ಶಿಂಧೆ, “ಸುಮಾರು 500 ಪುಟಗಳ ಈ ಕೃತಿಯಲ್ಲಿ ಮೂರು ತಲೆಮಾರುಗಳ ಕಥನ ಕೊಂಡಿಗಳನ್ನು ದಾಖಲಿಸಲಾಗಿದೆ. ಐದು ದಶಕಗಳ ರಾಜಕೀಯ ಜೀವನದಲ್ಲಿ ಯಾವುದೇ ಕಳಂಕವಿಲ್ಲದೆ ಸಾಗಿರುವ ಖರ್ಗೆ ಅವರ ಬದುಕು ಮತ್ತು ಹೋರಾಟವನ್ನು ಕೃತಿ ಕಟ್ಟಿಕೊಡುತ್ತದೆ” ಎಂದರು.

2866847

“ಖರ್ಗೆ ಅವರ ಬಾಲ್ಯ, ರಾಜಕೀಯ ಪ್ರವೇಶ, ಹೋರಾಟದ ಹಿನ್ನೆಲೆ ಸೇರಿದಂತೆ ವಿವಿಧ ಆಯಾಮಗಳನ್ನು ಗ್ರಂಥ ಒಳಗೊಂಡಿದೆ. ವಿಶೇಷವಾಗಿ ಆರನೇ ಭಾಗದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ 371(ಜೆ) ಕುರಿತ ವಿಚಾರಗಳನ್ನು ದಾಖಲಿಸಲಾಗಿದೆ. ಬುದ್ಧನ ವಿಚಾರಧಾರೆಯನ್ನು ರಾಜಕೀಯದಲ್ಲಿ ಅಳವಡಿಸಿಕೊಂಡು ಅಧಿಕಾರಕೇಂದ್ರಿತ ರಾಜಕಾರಣಕ್ಕೆ ಪರ್ಯಾಯ ಚಿಂತನೆ ರೂಪಿಸಿದ ಖರ್ಗೆ ಅವರ ಬದುಕನ್ನು ಈ ಕೃತಿ ದಾಖಲಿಸಿರುವುದರಿಂದ ಚಾರಿತ್ರಿಕ ಮಹತ್ವ ಹೊಂದಿದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಡಾ. ದತ್ತಾತ್ರೇಯ ಇಕ್ಕಳಕಿ ಹಾಗೂ ಬಸವರಾಜ ದೇಶಮುಖ ಮಾತನಾಡಿದರು.

ಡಾ. ಅಪ್ಪುಗೆರೆ ಸೋಮಶೇಖರ್ ಸ್ವಾಗತಿಸಿದರು. ಸಿದ್ಧಾರ್ಥ್ ಚಿಮ್ಮಾಇದ್ಲಾಯಿ, ಸಂದೀಪ್ ಬಿ. ಹಾಗೂ ತಂಡದವರು ರಂಗಗೀತೆಗಳನ್ನು ಪ್ರಸ್ತುತಪಡಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಚಿವ ಡಾ. ಅಜಯಸಿಂಗ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಸಜ್ಜು

ಈ ಸಂದರ್ಭದಲ್ಲಿ ದೇವಯ್ಯ ಗುತ್ತೇದಾರ್, ಸಚಿವ ಡಾ. ಶರಣಪ್ರಕಾಶ ಪಾಟೀಲ್, ಬಿ.ಆರ್. ಪಾಟೀಲ್, ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಹಜರತ್ ಹಾಫೀಜ್ ಡಾ. ಸೈಯ್ಯದ್ ಮಹಮ್ಮದ್ ಅಲಿ ಅಲ್-ಹುಸೇನಿ ಸಾಹೇಬ್, ಎಂ.ವೈ. ಪಾಟೀಲ್, ಜಗದೇವ್ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ್, ಸುಭಾಷ್ ಎಲ್. ಶಿಕ್ಷಣಕರ್, ಅಭಿಮನ್ಯು ಶೃಂಗೇರಿ, ಡಿ.ಜಿ. ಸಾಗರ್, ಡಾ. ಮೀನಾಕ್ಷಿ ಬಾಳಿ, ಆರ್.ಜಿ. ಶೆಟಗಾರ, ಲಕ್ಷ್ಮಣ ದಸ್ತಿ, ಮಲ್ಲಿಕಾರ್ಜುನ ಸುಭಾನೆ ಸೇರಿದಂತೆ ಸಚಿವರು, ಶಾಸಕರು ಹಾಗೂ ಖರ್ಗೆ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...