ಕಲಬುರಗಿ | ಮುಖ್ಯಮಂತ್ರಿ ಆಗಮನ ಹಿನ್ನೆಲೆ ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜುಲೈ 6 ಮತ್ತು 7ರ ಕಲಬುರಗಿ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಚುರುಕುಗೊಳಿಸಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೂಚಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಜುಲೈ 6ರಂದು ರಾತ್ರಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಜುಲೈ 7ರಂದು ಕಲಬುರಗಿ ವಿಭಾಗದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವರು, ಶಾಸಕರು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸರ್ಕಾರಿ ರಜೆ ಇದ್ದರೂ ಭಾನುವಾರದೊಳಗೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಭದ್ರತೆ, ಶಿಷ್ಠಾಚಾರ, ಸಭಾಂಗಣದ ವ್ಯವಸ್ಥೆ, ಸಾರಿಗೆ, ವಸತಿ, ಊಟೋಪಚಾರ ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಇಲಾಖೆಗಳು ಸಮನ್ವಯದಿಂದ ನಿರ್ವಹಿಸಬೇಕು ಎಂದು ಹೇಳಿದರು.

ಸಭೆ ನಡೆಯುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ವಿಕಾಸಸೌಧ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ, ವಿವಿಧ ಇಲಾಖೆಗಳ ಪ್ರಗತಿ ವರದಿಗಳನ್ನು ನಿಗದಿತ ಸಮಯಕ್ಕೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರವಾಸದ ಯಶಸ್ವಿ ಆಯೋಜನೆಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ರೈತರಿಗೆ ಮಹತ್ವದ ಸುದ್ದಿ; ಮುಂಗಾರು ಬೆಳೆ ವಿಮೆ ನೋಂದಣಿಗೆ ಜಿಲ್ಲಾಡಳಿತ ಕರೆ

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಸಂಕನೂರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...