ಕಲಬುರಗಿ ಜಿಲ್ಲೆ ಹಸಿರೀಕರಣಕ್ಕೆ ಪಣ : ಜು.5ರಂದು ವನಮಹೋತ್ಸವ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

Date:

Advertisements

ಕಲಬುರಗಿ ನಗರ ಹಾಗೂ ಜಿಲ್ಲೆಯನ್ನು ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್‌ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ ಮಾಡುವ ʼವನಮಹೋತ್ಸವʼ ಕಾರ್ಯಕ್ರಮಕ್ಕೆ ಜುಲೈ 5ರಂದು ಚಾಲನೆ ನೀಡಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಮತ್ತು ಕಲಬುರಗಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ತಿಳಿಸಿದರು.

ʼವನಮಹೋತ್ಸವ ಆಂದೋಲನಕ್ಕೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. ಈ ವನಮಹೋತ್ಸವ ಅಂಗವಾಗಿ ನರೇಗಾ ಯೋಜನೆಯಡಿ 5000 ಕಿ.ಮೀ ವ್ಯಾಪ್ತಿಯ ರಸ್ತೆಗಳ ಬದಿ ಗಿಡ ನೆಡುವ ʼಹಸಿರುಪಥʼ ಹಾಗೂ ಕಲಬುರಗಿ ನಗರ ಹಸಿರೀಕರಣ ಕಾರ್ಯಕ್ರಮವಾದ ʼಮನೆಗೊಂದು ಮರʼ ಯೋಜನೆಗಳಡಿ ಜಿಲ್ಲೆಯಲ್ಲಿ ಸಸಿ ಬೆಳೆಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆʼ ಎಂದು ತಿಳಿಸಿದ್ದಾರೆ.

Advertisements

ʼಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ ಹೆಚ್ಚಿದ್ದು, ಕಲಬುರಗಿ ಜಿಲ್ಲೆಯಲ್ಲಿ ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸುವುದರಿಂದ ಕನಿಷ್ಠ ಒಂದು ಡಿಗ್ರಿ ಸೆಲ್ಸಿಯಸ್‌ ತಾಪಮಾನವನ್ನಾದರೂ ತಗ್ಗಿಸಲು ಪ್ರಯತ್ನ ಪಡಬೇಕು ಎಂಬುವುದು ಈ ಯೋಜನೆಯ ಉದ್ದೇಶವಾಗಿದೆʼ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷ 25 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಯೋಜನೆಯನ್ನು ರೂಪಿಸಲಾಗಿದೆ. ಕಲಬುರಗಿ ನಗರದಲ್ಲಿ 4 ಕೆರೆಗಳು, 5 ಉದ್ಯಾನವನಗಳು, 23 ವೃತ್ತಗಳು ಸೇರಿದಂತೆ ಇಡೀ ನಗರವನ್ನು ಮರ-ಗಿಡಗಳಿಂದ ಹಸಿರೀಕರಣಗೊಳಿಸುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ’ ಎಂದರು.

ಇದನ್ನೂ ಓದಿ : ರಾಜ್ಯ ಸರ್ಕಾರದ ʼಕಾಮ್ ಕಿ ಬಾತ್‌ʼ ಯಶಸ್ಸು ʼಮನ್ ಕಿ ಬಾತ್‌ನಲ್ಲಿ ಪ್ರಸ್ತಾಪ : ಸಚಿವ ಪ್ರಿಯಾಂಕ್‌ ಖರ್ಗೆ

ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅರಣ್ಯ ಅಧಿಕಾರಿಗಳು ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X