ಕಲಬುರಗಿ ಜಿಲ್ಲೆ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗೆ ನೀಲನಕ್ಷೆ ತಯಾರಿಸಿ : ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಕಲಬುರಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗಾಗಿ ನೀಲನಕ್ಷೆ ತಯಾರಿಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಹಾಗೂ ಹಾಗೂ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತರೊಂದಿಗೆ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಕಲಬುರಗಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಬೇಕಾದ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲು ಸೂಚಿಸಿದ್ದಾರೆ.

ʼಈ ಬಾರಿಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆಯು ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬುದನ್ನು ತೋರಿಸುತ್ತಿದೆ. ಶಿಕ್ಷಣವು ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರಿಣಾಮ ಬೀರುತ್ತವೆ ಎನ್ನುವುದನ್ನೂ ಸಹ ಒಪ್ಪಿಕೊಳ್ಳಬೇಕಿದೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisements

ಕಲಬುರಗಿ ಜಿಲ್ಲೆಯಲ್ಲಿನ ಶೈಕ್ಷಣಿಕ ಸ್ಥಿತಿಯನ್ನು ಉತ್ತಮಗೊಳಿಸುವ ಕೆಲಸವನ್ನು ನಾವು ಮಾಡಲೇಬೇಕಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ ಸಚಿವರು, ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ನ್ಯೂನ್ಯತೆಗಳನ್ನು ಅಧ್ಯಯನ ಮಾಡಿ ಪರಿಹಾರಗಳ ಕುರಿತು ಗಂಭೀರವಾಗಿ ಚಿಂತನೆ ನಡೆಸಬೇಕು ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದ್ದಾರೆ. ಈ ಶೈಕ್ಷಣಿಕ ವರ್ಷಕ್ಕೆ ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಸಂತೆ ನೀಲನಕ್ಷೆಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X