ಕಲಬುರಗಿ | ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಆಟ ಆಡದಿರಿ: ಮಿಲಿಂದ ಸಾಗರ

Date:

Advertisements

ಗುಲ್ಬರ್ಗಾ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವಂತಿದೆ. ಇದು ವಿಶ್ವವಿದ್ಯಾಲಯಕ್ಕೆ ಶೋಭೆಯಲ್ಲ ಬಡ ಕೂಲಿ ಕಾರ್ಮಿಕರ, ರೈತರ ಮಕ್ಕಳ ಭವಿಷ್ಯದ ಜೊತೆ ಆಟ ಆಡದಿರಿ ಎಂದು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಮುಖಂಡ ಮಿಲಿಂದ ಸಾಗರ್ ಅಭಿಮತ ವ್ಯಕ್ತಪಡಿಸಿದರು.

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನೆ ಮೆರವಣಿಗೆ ತೆರಳಿ ಉಪ ದಂಡಾಧಿಕಾರಿಗೆ ಮನವಿ ಸಲ್ಲಿಸಿದರು.

ಸಾಮಾಜಿಕ ಕಾರ್ಯಕರ್ತ, ಯುವ ಹೋರಾಟಗಾರ ಮಿಲಿಂದ ಸಾಗರ್ ಮಾತನಾಡಿ, “ಸದರಿ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮೂರು ವರ್ಷದ ವ್ಯಾಸಂಗ ಅವಧಿ ಮುಗಿಯುತ್ತಾ ಬಂದರೂ ಕೂಡಾ ಫಲಿತಾಂಶ ಪ್ರಕಟಿಸಿಲ್ಲ” ಎಂದು ಆರೋಪಿಸಿದರು.

Advertisements

“ಯುಯುಸಿಎಂಎಸ್‌ನಲ್ಲಿ ಪರೀಕ್ಷೆ ಮೊತ್ತ, ಕಾಲೇಜು ಮೊತ್ತ ಹಾಗೂ ಇತರೆ ಕೆಲಸಗಳಿಗೆ ಸರ್ವರ್ ಸಮಸ್ಯೆಯಿಂದ ಕಾಲೇಜು ಅವಧಿ ಮುಗಿದರೂ ಅಂಕಪಟ್ಟಿ ದೊರೆತಿಲ್ಲ. ಹತ್ತು ಹಲವು ಸಮಸ್ಯೆಗಳು ನಮ್ಮ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಪರೀಕ್ಷೆಯಲ್ಲಿ ವಿಫಲವಾದ ವಿದ್ಯಾರ್ಥಿಗಳಿಗೆ ಪ್ರಮೋಟ್ ಮಾಡಬೇಕು ಅಥವಾ ಮರುಪರಿಕ್ಷೇ ಬರೆಯಲು ಅನುಮತಿ ನೀಡಬೇಕು. 15 ದಿನಗಳಲ್ಲಿ ಈ ಪ್ರಕ್ರಿಯೆ ಜಾರಿ ಮಾಡದಿದ್ದರೆ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ” ಎಂದು ಎಚ್ಚರಿಸಿದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ: ಜಿಲ್ಲಾಧಿಕಾರಿ ವೈಶಾಲಿ 

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರತಿನಿಧಿ ಮಂಜುನಾಥ್ ಕೆ ಮಲ್ಲಾಬಾದ್, ಎಎಎಸ್‌ಎ ಮುಖಂಡ ಜೈ ಭೀಮ್ ಸಿಂಗ್ಗೆ. ವಿದ್ಯಾರ್ಥಿಗಳಾದ ಭಾಗಣ್ಣ ಎಂ ಮುತ್ತುಗೊಳ್. ರಾಜು ಜನಿವಾರ, ಆಕಾಶ್ ಬೆಳ್ವಾರ್, ಸುರೇಶ್ ಖಾದಾಪುರ್, ಭಾಗಣ್ಣ ವನಗುಂಟ, ಶಿವರಾಮ ಗುಡೂರ್, ಭೀಮಣ್ಣ, ಸಮೀರ್, ಸ್ವಾಮಿ, ಯಲಾಲಿಂಗ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X