ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ ಸೇರಿ ಐವರ ವಿರುದ್ಧ ದೂರು ದಾಖಲು

Date:

ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಮಲಾಪುರ ತಾಲೂಕಿನ ತಾಂಡಾವೊಂದರ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

‘2023ರಲ್ಲಿ ಮದುವೆ ಸಮಯದಲ್ಲಿ 8 ತೊಲೆ ಬಂಗಾರ ಹಾಗೂ ₹2 ಲಕ್ಷ ವರದಕ್ಷಿಣೆ ನೀಡುವುದಾಗಿ ಮಾತಾಗಿತ್ತು. ಆರ್ಥಿಕ ಸಂಕಷ್ಟ ಇರುವ ಕಾರಣ 1 ತೊಲೆ ಬಂಗಾರ ಹಾಗೂ ₹1ಲಕ್ಷ ನಂತರ ಕೊಡುವುದಾಗಿ ಹೇಳಲಾಗಿತ್ತು. ಮದುವೆಯಾದ ಬಳಿಕ ಉಳಿದ ವರದಕ್ಷಿಣೆ ತರುವಂತೆ ಪ್ರತಿದಿನ ಮಾನಸಿಕ, ದೈಹಿಕ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಉಳಿದ ವರದಕ್ಷಿಣೆ ತರುವಂತೆ ಗಂಡ, ಮಾವ, ಭಾವ ಸೇರಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹೊಡೆಯುವುದು ಮಾಡುತ್ತಿದ್ದಾರೆ. ಇಲ್ಲದಿದ್ದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಭಯದಿಂದ ಆ.1ರಂದು ತವರು ಮನೆಗೆ ಬಂದಿದ್ದೇನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಈ ದೂರಿನ್ವಯ ಕಾಳಗಿ ತಾಲೂಕಿನ ಸೇರಿ ಬಡಾ ತಾಂಡಾದ ನಿವಾಸಿ, ಪತಿ ಸೇವಕ, ಮಾವ ಭೀಮಸಿಂಗ್, ಭಾವ ಲೋಕೇಶ ಸೇರಿ ಒಟ್ಟು ಐದು ಜನರ ವಿರುದ್ಧ ವಿರುದ್ಧ ಐಪಿಸಿಯ ಕಲಂ 85, 115(2), 352, 351(2) ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಕಲಂ 3 ಹಾಗೂ 4ರಡಿ ಕಲಬುರಗಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ಸ್ವಾಗತ ಸಮಿತಿ ಅಧ್ಯಕ್ಷರಾಗಿ ಬಸವರಾಜ ಧನ್ನೂರ ನೇಮಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...