ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು.
ಕಲಬುರಗಿ ನಗರದ ಕನ್ನಡ ಭವನದಲ್ಲಿ ಭಾನುವಾರ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ವಿಷಯ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಡಾ.ಅಂಬೇಡ್ಕರ್ ಜಯಂತೋತ್ಸವ ಜಿಲ್ಲಾ ಸಮಿತಿಯ ಅಧ್ಯಕ್ಷ ಮಹೇಶ ತೆಲ್ಲೂರಕರ, ಪ್ರಚಾರ ಸಮಿತಿ ಅಧ್ಯಕ್ಷ ವಿನೋದ ಕಾಂಬ್ಳೆ ಸೇರಿದಂತೆ ಸಂಯೋಜಕರಾದ ಅರವಿಂದ ಕಮಲಾಪುರ, ಮಂಜುನಾಥ್ ಬಂಡಾರಿ, ವಿಜಯಕುಮಾರ್ ಕಾಂಬಳೆ, ಸುನಿಲ ಕೋವಿ ಭಾಗ್ಯರತನ ನವೀನ ಪಾಳ, ಹುಸೇನಿ ಪಾಳಾ ಇದ್ದರು.
