ಕಲಬುರಗಿ | ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ವಿತರಿಸಿ ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಂದ ಪುಣ್ಯ ಸ್ಮರಣೆ

Date:

ಡಾ.ಪುನೀತ್ ರಾಜ್‌ಕುಮಾರ್ ಅವರ 3ನೇ ಪುಣ್ಯ ಸ್ಮರಣೆ ಅಂಗವಾಗಿ ಕಲಬುರಗಿಯ ಭಾಗ್ಯಜೋತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಕಲಬುರಗಿ ನಗರದ ವೃದ್ಧಾಶ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಸಂಘ ಮತ್ತು ಭೀಮ ಯುವ ಸೇನೆ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

“ಡಾ.ಪುನೀತ್ ರಾಜ್‌ಕುಮಾರ್ ಅವರು ಸಾಮಾಜಿಕ ಕಳಕಳಿ ಮತ್ತು ಅವರ ವಿಚಾರಗಳು ಸಮಾಜಕ್ಕೆ ಕೊಡುಗೆಯಾಗಿದೆ. ಅವರ ಮಕ್ಕಳಿಗೆ, ಮಹಿಳೆಯರಿಗೆ ,ತಂದೆ ತಾಯಿಯರಿಗೆ ,ಗುರು ಹಿರಿಯರಿಗೆ, ಅನಾಥರಿಗೆ ,ನಿರ್ಗತಿಕರಿಗೆ, ಗೌರವ, ಕರುಣೆ ,ಪ್ರೀತಿಯ ಮನೋಭಾವದಿಂದ ಎಲ್ಲಾ ಜಾತಿ ಜನಾಂಗದವರನ್ನು ಗೌರವದಿಂದ ಕಾಣುವ ಮೂಲಕ, ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಇಂದಿನ ದಿನಗಳಲ್ಲಿ ಯುವಕರು ಇಂಥ ಆದರ್ಶ ವ್ಯಕ್ತಿಯ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು” ಎಂದು ಮೈಲಾರಿ ದೊಡ್ಡಮನಿ ಅವರು ಕಾರ್ಯಕ್ರಮದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
WhatsApp Image 2024 10 30 at 16.47.23

“ಡಾ.ಪುನೀತ್ ರಾಜಕುಮಾರ್ ಅವರ 3 ನೇ ಪುಣ್ಯಸ್ಮರಣೆ ದಿನ, ಪ್ರತಿ ವರ್ಷದಂತೆ ಈ ವರ್ಷವೂ ವೃದ್ಧಾಶ್ರಮದಲಿರುವ ಅನಾಥ ಮತ್ತು ನಿರ್ಗತಿಕರಿಗೆ ಹಣ್ಣು, ಹಂಪಲು, ಬ್ರೆಡ್, ಬಿಸ್ಕೆಟ್ ನೀಡುವುದರ ಮೂಲಕ, ಅವರ ಜೀವನ ಶೈಲಿ ಹಾಗೂ ಸರಳತೆ, ನಡೆ, ನುಡಿ ಕಲಿಯಬೇಕು. ಅಪ್ಪು ಅವರನ್ನು ನೆನೆಯುತ್ತಾ ಈ ಸೇವೆ ಮಾಡುತ್ತಿದ್ದೆವೆ ಎಂದು ಡಾ.ಪುನೀತ ರಾಜಕುಮಾರ ಅಭಿಮಾನಿ ಸಂಘ ಮತ್ತು ಭೀಮ ಯುವ ಸೇನೆಯ ಅಧ್ಯಕ್ಷರಾದ ಸಂತೋಷ ಹಾವನೂರ ಹೇಳಿದರು.

ಈ ಸಂದರ್ಭದಲ್ಲಿ ಮಹಾಂತೇಶ ಸಿಂಗೆ, ರಜನಿಕಾಂತ ಸಿಂಗೆ, ಟ್ರಸ್ಟಿನ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ, ರೇವಣಸಿದ್ದ ಗೋರಗೋಳ, ಶ್ರೀಮತಿ ಕರುಣಾ ಕಲಬುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ಮೈಲಾರಿ ದೊಡ್ಡಮನಿ, ಸಿಟಿಜನ್ ಜರ್ನಲಿಸ್ಟ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...