ಕಲಬುರಗಿ | ಈ ದಿನ ಫಲಶೃತಿ: ವರದಿಯ ಬೆನ್ನಲ್ಲೇ ರಾಜ್ಯ ಹೆದ್ದಾರಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ

Date:

ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿ ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

- Advertisement -

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ ಹೆದ್ದಾರಿ ಸಂಖ್ಯೆ 126ರ ರಸ್ತೆಮಾರ್ಗ ಕಮಲಾಪುರದಿಂದ ಜೀವಣಗಿ, ರಟಗಲ್, ಟೆಂಗಳಿ ಕ್ರಾಸ್, ಚಿತ್ತಾಪುರ, ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಾಜ್ಯ ಹೆದ್ದಾರಿಯಾಗಿದ್ದು, ಈ ರಸ್ತೆ ಮಧ್ಯೆ ಕಮಲಾಪುರದಿಂದ 500 ಮೀಟರ್ ದೂರದಲ್ಲಿ ಸೇತುವೆಯಿದೆ. ಆ ಸೇತುವೆ ಕುಸಿದು ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜೀವಣಗಿ, ರಟಗಲ್, ಟೆಂಗಳಿ ಕ್ರಾಸ್, ಚಿತ್ತಾಪುರ, ಚಿಂಚೋಳಿ ಗ್ರಾಮ ತಾಲೂಕುಗಳಿಗೆ ಸಂಚರಿಸಲು ಅದೊಂದೇ ಮಾರ್ಗವಾಗಿತ್ತು. ಈ ರಸ್ತೆ ಮೂಲಕ ನಿರಂತರವಾಗಿ ಬೃಹತ್ ವಾಹನಗಳಾದ ಬಸ್, ಲಾರಿ,‌ ಗೂಡ್ಸ್ ವಾಹನಗಳು ಮತ್ತು ದ್ವಿಚಕ್ರ ವಾಹನ ಸಾವಿರಾರು ಈ ರಸ್ತೆ ಮೂಲಕ ಸಂಚಾರ ಮಾಡುತ್ತಿದ್ದರೂ ಸೇತುವೆ ಕುಸಿದು ಬಿದ್ದು ವಾಹನ ಸಾವರರು ತುಂಬಾ ತೊಂದರೆ ಎದುರಿಸುತ್ತಿರುವುದು ಕಂಡುಬಂದಿತ್ತು.

ಸೇತುವೆ ಬಿದ್ದಾಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೇತುವೆ‌ ವೀಕ್ಷಿಸಿ ಕಮಲಾಪುರ ತಹಶೀಲ್ದಾರ್ ಅವರಿಗೆ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿಕೊಡುವುದಾಗಿ ಸೂಚಿಸಿದ್ದರು. ಆದರೆ ಎರಡೂವರೆ ತಿಂಗಳಾದರೂ ಸೇತುವೆ ನಿರ್ಮಾಣದ ಕುರಿತು, ತಾತ್ಕಾಲಿಕ ರಸ್ತೆ ಕುರಿತು ಅಧಿಕಾರಿಗಳು ಯಾವುದೇ ಕಾಮಗಾರಿ ನಡೆಸಿರುವುದಿಲ್ಲ. ಸೇತುವೆ ಬಿದ್ದು ತಿಂಗಳಾದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ” ಎಂದು ಗ್ರಾಮಸ್ಥರು ಆರೋಪಿಸಿದ್ದರು. ಅಲ್ಲದೇ, ಪ್ರತಿಭಟನೆ ನಡೆಸುವ ಎಚ್ಚರಿಕೆ ಕೂಡ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಈ ದಿನ. ಕಾಮ್ ಅಕ್ಟೋಬರ್ 25, 2024ರಂದು ವರದಿ‌ ಮಾಡಿತ್ತು. ಬಳಿಕ ನವೆಂಬರ್ 6ರಂದು ವಿಶೇಷ ವಿಡಿಯೋ ಸ್ಟೋರಿ ಪ್ರಕಟಿಸಿತ್ತು. ವರದಿಯ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು, ಸಾರ್ವಜನಿಕರಿಗೆ ಸಂಚರಿಸಲು ತಾತ್ಕಾಲಿಕವಾಗಿ ರಸ್ತೆ ನಿರ್ಮಾಣ ಮಾಡಿ, ಅನುಕೂಲ ಮಾಡಿಕೊಟ್ಟಿದ್ದಾರೆ.

klmpr

ಈ ಬಗ್ಗೆ ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಪಿಡಬ್ಲ್ಯೂಡಿ ಅಧಿಕಾರಿ ಶರಣಪ್ಪ ಪಾಟೀಲ ಮಾತನಾಡಿ “ಗುಮ್ಮಿ, ಮುರಮ ಹಾಕಿ ಬಸ್, ಲಾರಿ, ವಾಹನ ಸವಾರರು ಸಂಚರಿಸಲು ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿ ಅನುಕೂಲ ಮಾಡಿಕೊಟ್ಟಿದ್ದೇವೆ. ಇನ್ನಷ್ಟು ಅನುದಾನ ಬಿಡುಗಡೆ ಮಾಡಿದ ತಕ್ಷಣವೇ ಶಾಶ್ವತ ಸೇತುವೆ ನಿರ್ಮಾಣ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಈ ದಿನ.ಕಾಮ್‌ನೊಂದಿಗೆ ಮಾತನಾಡಿದ್ದ ಕಮಲಾಪುರ ತಹಶೀಲ್ದಾರ್ ಮೊಹಮ್ಮದ್ ಮುಹ್ಸಿನ್‌, “ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ನಿರಂತರ ಸಂಪರ್ಕ ಮಾಡುತ್ತಿದ್ದೇವೆ. ಸಾಮಗ್ರಿಗಳನ್ನು ತಂದು ಹಾಕಿದ್ದಾರೆ. ಕೆಲಸಗಾರರು ಸಿಗುತ್ತಿಲ್ಲ. ಹಬ್ಬ ಮುಗಿದ ಬಳಿಕ ಮಾಡುತ್ತೇವೆಂದು ಕೆಲಸ ಆರಂಭಿಸುವುದಾಗಿ ಪಿಡಬ್ಲ್ಯೂಡಿ ಅಧಿಕಾರಿಗಳು ತಿಳಿಸಿದ್ದಾರೆ. ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಎಸ್ಟಿಮೇಟ್ ಹೆಚ್ಚಿಗೆ ಮಾಡಿರುವುದರಿಂದ ತಾತ್ಕಾಲಿಕ‌ ಕಾಮಗಾರಿ ನಡೆಸದೆ ಶಾಶ್ವತ ಸೇತುವೆ ಮಾಡಲಾಗುವುದು” ಎಂದಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ರಾಜ್ಯ ಹೆದ್ದಾರಿ 126ರ ಸೇತುವೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ಸದ್ಯ, ತಾತ್ಕಾಲಿಕ ರಸ್ತೆಯನ್ನು ನಿರ್ಮಾಣ ಮಾಡಿರುವುದರಿಂದ ಕಡಿತಗೊಂಡಿದ್ದ ಸಂಪರ್ಕ ಮತ್ತೆ ಸಾಧ್ಯವಾಗಿದೆ. ಹೀಗಾಗಿ, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದಷ್ಟು ಶೀಘ್ರವೇ ಶಾಶ್ವತ ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ. ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆದಿದ್ದಕ್ಕೆ ಈ ದಿನ.ಕಾಮ್‌ಗೆ ದಸಂಸ ತಾಲೂಕು ಸಂಚಾಲಕ ವಿಜಯಕುಮಾರ್ ಟೈಗರ್, ದಲಿತ ಮುಂಖಡ ವಿದ್ಯಾಧರ್ ಮಾಳಗೆ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗಿರೆಪ್ಪ ಬೆಳಕೋಟಿ ಧನ್ಯವಾದ ತಿಳಿಸಿದ್ದಾರೆ.

kamalapura
33 7
3 16

WhatsApp Image 2026 05 02 at 12.01.27 e1777704270988
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...