ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-2ರ ವ್ಯಾಪ್ತಿಯ ಐದು ಉಪವಿಭಾಗಗಳ ಕಚೇರಿಗಳಲ್ಲಿ ನವೆಂಬರ್ 21ರಂದು ವಿದ್ಯುತ್ ಸುರಕ್ಷತಾ ದಿನ ಹಾಗೂ ಗ್ರಾಹಕರ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.
ಜೇವರ್ಗಿ, ಯಡ್ರಾಮಿ, ಶಹಾಬಾದ್, ಚಿತ್ತಾಪುರ ಹಾಗೂ ಕಾಳಗಿ ಜೆಸ್ಕಾಂ ಉಪವಿಭಾಗಗಳ ಕಚೇರಿಗಳಲ್ಲಿ ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಭೆ ನಡೆಯಲಿದೆ.
ಇದನ್ನು ಓದಿದ್ದೀರಾ? ಕಲಬುರಗಿ | 55 ವರ್ಷಗಳಾದರೂ ಕುಡಿಯುವ ನೀರಿಗೆ ಪರದಾಟ; ಪಾಲಿಕೆ ಎದುರು ಕರವೇ ಪ್ರತಿಭಟನೆ
ಸಂಬಂಧಪಟ್ಟ ಗ್ರಾಮೀಣ ಪ್ರದೇಶಗಳ ವಿದ್ಯುತ್ ಪೂರೈಕೆ, ವಿದ್ಯುತ್ ವ್ಯತ್ಯಯ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಲು ಗ್ರಾಹಕರಿಗೆ ಇದು ಉತ್ತಮ ಅವಕಾಶವಾಗಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಅಧಿಕಾರಿಗಳ ಮುಂದೆ ಮಂಡಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





